ಹಾರ್ದಿಕ್‌ ಪಾಂಡ್ಯ ಎರಡನೇ ಮದುವೆ? ಖ್ಯಾತ ನಟಿ ಜೊತೆ ಡೇಟಿಂಗ್‌ ವದಂತಿ ! : ಹಾರ್ದಿಕ್ ಪಾಂಡ್ಯ‌ ಹೆಸರು ಖ್ಯಾತ ಬಾಲಿವುಡ್‌ ನಟಿ ಜೊತೆ ಸೇರಿಕೊಂಡಿದೆ. ಅನಂತ್ ಅಂಬಾನಿ ರಾಧಿಕಾ ಮದುವೆ ಬಳಿಕವಂತೂ ಹಲವಾರು ವದಂತಿಗಳು ಶುರುವಾಗಿವೆ. :ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಪತ್ನಿ ನತಾಶಾ ಅವರಿಂದ ವಿಚ್ಛೇದನ ಪಡೆದಿದ್ದಾರೆ. ನಾಲ್ಕು ವರ್ಷಗಳ ದಾಂಪತ್ಯಕ್ಕೆ ಈ ಮೂಲಕ ಅಂತ್ಯ ಹಾಡಿದ್ದಾರೆ. ಇದಾದ ಬಳಿಕ ಹಾರ್ದಿಕ್ ಪಾಂಡ್ಯ‌ ಹೆಸರು ಖ್ಯಾತ ಬಾಲಿವುಡ್‌ ನಟಿ ಜೊತೆ ಸೇರಿಕೊಂಡಿದೆ. ಅನಂತ್ ಅಂಬಾನಿ ರಾಧಿಕಾ ಮದುವೆ ಬಳಿಕವಂತೂ ಹಲವಾರು ವದಂತಿಗಳು ಶುರುವಾಗಿವೆ. ಹಾರ್ದಿಕ್ ಪಾಂಡ್ಯ ಮತ್ತು ಅನನ್ಯಾ ಪಾಂಡೆ ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡಲು ಆರಂಭಿಸಿದ್ದಾರೆ. ಈ ಬೆನ್ನಲ್ಲೇ ಇಬ್ಬರ ನಡುವೆ ಏನೋ ಶುರುವಾಗಿದೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ. ಅಲ್ಲದೇ ಅನಂತ್ ಅಂಬಾನಿ ಮದುವೆಯಲ್ಲೂ ಹಾರ್ದಿಕ್‌ ಮತ್ತು ಅನನ್ಯಾ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇದನ್ನೂ ಓದಿ: ಮದುವೆಯಲ್ಲಿ ಅನನ್ಯಾ ಪಾಂಡೆಯೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಡ್ಯಾನ್ಸ್ ಮಾಡಿ ಪರಸ್ಪರ ಖುಷಿ ಪಡುತ್ತಿರುವ ವಿಡಿಯೋಗಳು ವೈರಲ್ ಆಗಿದ್ದು, ಊಹಾಪೋಹವನ್ನು ಮತ್ತಷ್ಟು ಹೆಚ್ಚಿಸಿದೆ. ‌ ಸಾಮಾಜಿಕ ಮಾಧ್ಯಮಗಳಲ್ಲಿ ಪಾಂಡ್ಯ, ಅನನ್ಯಾ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ವದಂತಿಯೂ ಶುರುವಾಗಿದೆ. ಬಾಲಿವುಡ್ ನಟಿ ಅನನ್ಯಾ ಪಾಂಡೆ ಈ ಹಿಂದೆ ನಟ ಆದಿತ್ಯ ರಾಯ್ ಕಪೂರ್ ಅವರೊಂದಿಗೆ ಸಂಬಂಧ ಹೊಂದಿದ್ದರು. ಇತ್ತೀಚಿನ ವರದಿಗಳ ಪ್ರಕಾರ ಅನನ್ಯಾ ಮತ್ತು ಆದಿತ್ಯ ಬ್ರೇಕಪ್‌ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾರ್ದಿಕ್ ಪಾಂಡ್ಯ ಮತ್ತು ಅನನ್ಯಾ ಪಾಂಡೆ ಇಬ್ಬರೂ ಅನೇಕ ಬಾರಿ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...