ಕ್ರಿಕೆಟ್‌ ಪ್ರಿಯರಿಗೆ ಗುಡ್‌ ನ್ಯೂಸ್:‌ 35 ವರ್ಷಗಳ ಬಳಿಕ ಭಾರತದಲ್ಲಿ ಆಯೋಜನೆಗೊಳ್ಳಲಿದೆ ಈ ಮಹಾ ಟೂರ್ನಿ 2025: 2023ರ ಏಷ್ಯಾಕಪ್‌ʼನ ಫೈನಲ್‌ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. 35 ವರ್ಷಗಳ ಬಳಿಕ ಭಾರತದಲ್ಲಿ ಈ ಟೂರ್ನಿ ಆಯೋಜಿಸಲಾಗುತ್ತಿದ್ದು, 1990-91ರಲ್ಲಿ ಭಾರತ ಕೊನೆಯ ಬಾರಿಗೆ ಆತಿಥ್ಯ ವಹಿಸಿತ್ತು. 2025:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2025ರಲ್ಲಿ ನಡೆಯಲಿರುವ ಪುರುಷರ ಏಷ್ಯಾ ಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಸಿದ್ಧವಾಗಿದೆ. ಈ ಟೂರ್ನಿ ಟಿ20 ಮಾದರಿಯಲ್ಲಿ ನಡೆಯಲಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಶನಿವಾರ ಈ ಮಾಹಿತಿ ನೀಡಿದೆ. ಇದನ್ನೂ ಓದಿ: 2023ರ ಏಷ್ಯಾಕಪ್‌ʼನ ಫೈನಲ್‌ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. 35 ವರ್ಷಗಳ ಬಳಿಕ ಭಾರತದಲ್ಲಿ ಈ ಟೂರ್ನಿ ಆಯೋಜಿಸಲಾಗುತ್ತಿದ್ದು, 1990-91ರಲ್ಲಿ ಭಾರತ ಕೊನೆಯ ಬಾರಿಗೆ ಆತಿಥ್ಯ ವಹಿಸಿತ್ತು. 2023ರ ಏಷ್ಯಾಕಪ್‌ʼಗೆ ಪಾಕಿಸ್ತಾನ ಆತಿಥ್ಯ ವಹಿಸಬೇಕಿತ್ತು, ಆದರೆ ಬಿಸಿಸಿಐ ತಂಡವನ್ನು ಅಲ್ಲಿಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ, ಪಾಕಿಸ್ತಾನವು ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಯಿತು. ಭಾರತ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿದ್ದಲ್ಲದೇ ಫೈನಲ್ ಕೂಡ ಅಲ್ಲಿಯೇ ನಡೆದಿತ್ತು. ಏಷ್ಯಾ ಕಪ್ 2023 ಮಾದರಿಯಲ್ಲಿ ಆಡಲಾಯಿತು. ಇದನ್ನೂ ಓದಿ: ಮೂರು ದಶಕಗಳ ಹಿಂದೆ ಭಾರತವು ಕೊನೆಯ ಬಾರಿಗೆ ಏಷ್ಯಾಕಪ್ ಅನ್ನು ಆಯೋಜಿಸಿತ್ತು. 1990-91ರಲ್ಲಿ ಪಂದ್ಯಾವಳಿಯ ನಾಲ್ಕನೇ ಋತುವನ್ನು ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಆತಿಥೇಯ ರಾಷ್ಟ್ರವು ಫೈನಲ್‌ʼನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ತನ್ನ ಪ್ರಶಸ್ತಿಯನ್ನು ಉಳಿಸಿಕೊಂಡಿತ್ತು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...