ಕೊಟ್ಟ ಅವಕಾಶ ಕೈಚೆಲ್ಲಿದ ಸ್ಟಾರ್‌ ಬ್ಯಾಟರ್...‌ ಮುಗಿದೇಹೋಯ್ತಾ ಟೀಂ ಇಂಡಿಯಾದ ಈ ಕ್ರಿಕೆಟಿಗನ ವೃತ್ತಿಜೀವನ!? : ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಉಪನಾಯಕ ಶುಭಮನ್ ಗಿಲ್ ಗಾಯಗೊಂಡಿದ್ದಾರೆ. ಇದರಿಂದಾಗಿ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್‌ʼಗೆ ಅವಕಾಶ ಸಿಕ್ಕಿತ್ತು. :ಭಾನುವಾರ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ತಂಡದಲ್ಲಿ ಒಂದು ಬದಲಾವಣೆ ಮಾಡಿ, ಸಂಜು ಸ್ಯಾಮ್ಸನ್‌ʼಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಲಾಯಿತು. ಆದರೆ, ಈ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗದ ಸಂಜು, ಗೋಲ್ಡನ್ ಡಕ್ ಔಟ್‌ ಆದರು. ಇದನ್ನೂ ಓದಿ: ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಉಪನಾಯಕ ಶುಭಮನ್ ಗಿಲ್ ಗಾಯಗೊಂಡಿದ್ದಾರೆ. ಇದರಿಂದಾಗಿ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್‌ʼಗೆ ಅವಕಾಶ ಸಿಕ್ಕಿತ್ತು. ಟಾಸ್ ವೇಳೆ ನಾಯಕ ಸೂರ್ಯಕುಮಾರ್, ಗಿಲ್ ಅವರಿಗೆ ಗಂಟಲು ನೋವು ಇದ್ದು, ಆದ್ದರಿಂದ ಎರಡನೇ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಶ್ರೀಲಂಕಾ ಪರ ಎರಡನೇ ಓವರ್ ಬೌಲ್ ಮಾಡಲು ಬಂದ ಮಹೀಷ್ ತೀಕ್ಷಣ, ಮೊದಲ ಬಾಲ್ʼನಲ್ಲಿಯೇ ಸಂಜು ಸ್ಯಾಮ್ಸನ್ ಅವರನ್ನು ಔಟ್‌ ಮಾಡಿದರು. ಟೀಂ ಇಂಡಿಯಾದಲ್ಲಿ ಸಂಜುಗೆ ಅವಕಾಶ ಸಿಕ್ಕಿದ್ದೇ ಕಡಿಮೆ. ಅದರಲ್ಲೂ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳದ ಅವರ ವೃತ್ತಿಜೀವನ ಅಂತ್ಯದತ್ತ ಸಾಗುತ್ತದೆಯೇನೋ ಎಂಬುದು ಅನೇಕರ ಮಾತು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...