ಪ್ಯಾರಿಸ್‌ ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ: ಶೂಟಿಂಗ್‌ʼನಲ್ಲಿ ಕಂಚು ಗೆದ್ದ ಮನು ಭಾಕರ್ : ಗೆಲುವಿನ ಮೂಲಕ ಒಲಂಪಿಕ್ ಗೇಮ್ಸ್‌ ಶೂಟಿಂಗ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಭಾಕರ್ ಪಾತ್ರರಾಗಿದ್ದಾರೆ. 2024 2 :ಶೂಟರ್ ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಕಂಚು ಗೆದ್ದಿದ್ದು, ಈ ಮೂಲಕ ಭಾರತಕ್ಕೆ ಮೊದಲ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಮಹಿಳೆಯರ 10 ಮೀ ಏರ್ ಪಿಸ್ತೂಲ್ ಫೈನಲ್‌ʼನಲ್ಲಿ ಗೆಲುವು ಸಾಧಿಸಿದ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದನ್ನೂ ಓದಿ: ಈ ಗೆಲುವಿನ ಮೂಲಕ ಒಲಂಪಿಕ್ ಗೇಮ್ಸ್‌ ಶೂಟಿಂಗ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಭಾಕರ್ ಪಾತ್ರರಾಗಿದ್ದಾರೆ. ಇನ್ನೊಂದೆಡೆ, ಅರ್ಜುನ್ ಬಾಬುತಾ ಮತ್ತು ರಮಿತಾ ಜಿಂದಾಲ್ ಅವರು ಪುರುಷರ ಮತ್ತು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್‌ʼಗೆ ಅರ್ಹತೆ ಪಡೆಯುವ ಮೂಲಕ ಭಾರತದ ಪದಕದ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಇನ್ನು ಈ ಗೆಲುವಿನ ಬಳಿಕ ಮಾತನಾಡಿದ ಮನು, "ಇದು ಭಾರತಕ್ಕೆ ದೀರ್ಘ ಕಾಲದ ಪದಕವಾಗಿತ್ತು. ಭಾರತವು ಇನ್ನೂ ಹೆಚ್ಚಿನ ಪದಕಗಳಿಗೆ ಅರ್ಹವಾಗಿದೆ. ನಾವು ಈ ಬಾರಿ ಸಾಧ್ಯವಾದಷ್ಟು ಪದಕಗಳನ್ನು ಗೆಲ್ಲಲು ಎದುರು ನೋಡುತ್ತಿದ್ದೇವೆ. ವೈಯಕ್ತಿಕವಾಗಿ ನನಗೆ ಈ ಸಾಧನೆ ಖುಷಿ ತಂದಿದೆ. ನಾನು ಕೊನೆಯ ಹಂತದವರೆಗೂ ಸಾಕಷ್ಟು ಪ್ರಯತ್ನ ಮಾಡಿದ್ದೇನೆ" ಎಂದಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...