: ಫೈನಲ್‌ನಲ್ಲಿ ವನಿತೆಯರ ಹೋರಾಟ..ಶ್ರೀಲಂಕಾದ ವಿರುದ್ಧ ಇಂದು ಎರಡು ಪಂದ್ಯಗಳ ರೋಚಕ ಕಾದಾಟ : ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ ಕಾದಿದೆ ಅಂತಾನೆ ಹೇಳಬಹುದು. ಇಂದು ಶ್ರೀಲಂಕಾ ವಿರುದ್ಧ ಭಾರತಕ್ಕೆ ಒಂದೇ ದಿನದಲ್ಲಿ ಎರಡು ಪಂದ್ಯಗಳನ್ನು ಆಡುಲಿದೆ. ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾವನ್ನು ಎದುರಿಸಲಿದ್ದು ಈ ಪಂದ್ಯದಲ್ಲಿ ಗೆದ್ದರೆ, 8ನೇ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಳ್ಳಲಿದೆ. ಮತ್ತೊಂದೆಡೆ ಪುರುಷರ ತಂಡ 3 ಪಂದ್ಯಗಳ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವ ಗುರಿ ಹೊಂದಿದೆ. ಮೊದಲ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾದರೆ ಎರಡನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. :ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ ಕಾದಿದೆ ಅಂತಾನೆ ಹೇಳಬಹುದು. ಇಂದು ಶ್ರೀಲಂಕಾ ವಿರುದ್ಧ ಭಾರತಕ್ಕೆ ಒಂದೇ ದಿನದಲ್ಲಿ ಎರಡು ಪಂದ್ಯಗಳನ್ನು ಆಡುಲಿದೆ. ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾವನ್ನು ಎದುರಿಸಲಿದ್ದು ಈ ಪಂದ್ಯದಲ್ಲಿ ಗೆದ್ದರೆ, 8ನೇ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಳ್ಳಲಿದೆ. ಮತ್ತೊಂದೆಡೆ ಪುರುಷರ ತಂಡ 3 ಪಂದ್ಯಗಳ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವ ಗುರಿ ಹೊಂದಿದೆ. ಮೊದಲ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾದರೆ ಎರಡನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಇಂದು ಒಂದಲ್ಲ ಎರಡು ಪಂದ್ಯಗಳು ನಡೆಯಲಿವೆ. ವಿಸ್ಮಯಕಾರಿ ಸಂಗತಿಯೆಂದರೆ ಇವೆರಡೂ ಟಿ20 ಮಾದರಿಯಲ್ಲಿ ನಡೆಯಲಿವೆ. ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಜುಲೈ 28 ರ ಭಾನುವಾರವನ್ನು ಸೂಪರ್ ಸಂಡೆ ಮಾಡಲು ಬಯಸುತ್ತಿವೆ. ಉಭಯ ತಂಡಗಳು ಪರಸ್ಪರ ಗೆಲುವು ಸಾಧಿಸುವ ಮೂಲಕ ಅದ್ಭುತಗಳನ್ನು ಸೃಷ್ಟಿಸುವ ಅವಕಾಶವನ್ನು ಹೊಂದಿವೆ. ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಗೆದ್ದು ಪುರುಷರ ತಂಡ ಸಮಬಲ ಸಾಧಿಸಲು ಬಯಸಿದ್ದರೆ, ಮಹಿಳಾ ತಂಡ ಮೊದಲ ಬಾರಿಗೆ ಏಷ್ಯಾಕಪ್ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: ಮಧ್ಯಾಹ್ನ 3 ಗಂಟೆಯಿಂದ ಭಾರತ ಮಹಿಳಾ ತಂಡ ಶ್ರೀಲಂಕಾ ವಿರುದ್ಧದ ಪಂದ್ಯ ಆರಂಭವಾಗಲಿದೆ. ಭಾರತ ಇಲ್ಲಿಯವರೆಗೆ ಆಡಿದ 8 ಏಷ್ಯಾಕಪ್ ಪ್ರಶಸ್ತಿಗಳಲ್ಲಿ 7 ಅನ್ನು ವಶಪಡಿಸಿಕೊಂಡಿದೆ. ಶ್ರೀಲಂಕಾ ಮಹಿಳಾ ತಂಡ 5 ಬಾರಿ ಫೈನಲ್‌ನಲ್ಲಿ ಸೋತಿದೆ.ಕಳೆದ ಬಾರಿ ಶ್ರೀಲಂಕಾ ಮಹಿಳಾ ತಂಡ ಫೈನಲ್‌ನಲ್ಲಿ ಭಾರತ ವಿರುದ್ಧ 8 ವಿಕೆಟ್‌ಗಳಿಂದ ಸೋತಿತ್ತು. ಶ್ರೀಲಂಕಾ ಪುರುಷರ ತಂಡ ಭಾರತ ವಿರುದ್ಧ ಸಂಜೆ 7 ಗಂಟೆಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆಡಲಿದೆ. ಮೊದಲ ಪಂದ್ಯದಲ್ಲಿ ಸೋತ ಶ್ರೀಲಂಕಾ ಸರಣಿಯಲ್ಲಿ ಉಳಿಯಲು ಎರಡನೇ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಭಾರತ ಸತತ ಎರಡನೇ ಪಂದ್ಯ ಗೆದ್ದರೆ ಶ್ರೀಲಂಕಾ ತಂಡಕ್ಕೆ ಸರಣಿ ಕೈ ತಪ್ಪಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...