ಶ್ರೀಲಂಕಾ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್‌ ಬೌಲರ್‌ʼಗೆ ಗಂಭೀರ ಗಾಯ! ಟೂರ್ನಿಯಿಂದ ಹೊರಕ್ಕೆ..! : 2024ರ ಟಿ20 ವಿಶ್ವಕಪ್‌ʼನ ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಬೌಲಿಂಗ್‌ ಪಡೆಯನ್ನು ಮುನ್ನಡೆಸುವ ಹಂತದಲ್ಲಿದ್ದರು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಸಿರಾಜ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. : ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೊದಲು ಟಿ20 ಹಾಗೂ ನಂತರ ಏಕದಿನ ಪಂದ್ಯಗಳನ್ನು ಆಡಲಿದೆ. ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರಿಗೆ ಇದು ಮೊದಲ ಪಂದ್ಯವಾಗಿದೆ. ಜುಲೈ 27ರಿಂದ ಶ್ರೀಲಂಕಾ ವಿರುದ್ಧದ ಟಿ20 ಸರಣಿ ಆರಂಭವಾಗಲಿದೆ. ಆದರೆ ಹೀಗಿರುವಾಗಲೇ ಟೀಂ ಇಂಡಿಯಾದ ಪ್ರಮುಖ ಬೌಲರ್ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಇದನ್ನೂ ಓದಿ: 2024ರ ಟಿ20ʼನ ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಬೌಲಿಂಗ್‌ ಪಡೆಯನ್ನು ಮುನ್ನಡೆಸುವ ಹಂತದಲ್ಲಿದ್ದರು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಸಿರಾಜ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಿದ್ದು, ಜುಲೈ 27ರಂದು ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟಿ20ಯಲ್ಲಿ ಸಿರಾಜ್ ಪಾಲ್ಗೊಳ್ಳುವುದು ಅನುಮಾನ ಎಂದು ತಂಡದ ಆಡಳಿತ ಮಂಡಳಿ ಹೇಳುತ್ತಿದೆ. ಸಿರಾಜ್ ಬದಲಿಗೆ ಯಾರು?ಈ ಪ್ರವಾಸದ ವೇಳೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೇವಲ ಮೂವರು ವೇಗದ ಬೌಲರ್‌ʼಗಳೊಂದಿಗೆ ಶ್ರೀಲಂಕಾಕ್ಕೆ ಆಗಮಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಖಲೀಲ್ ಅಹ್ಮದ್ ಮತ್ತು ಅರ್ಷದೀಪ್ ಸಿಂಗ್ ಅವರೊಂದಿಗೆ ಸಿರಾಜ್ ಬದಲಿಗೆ ಅವೇಶ್ ಖಾನ್ ಅಥವಾ ಮುಖೇಶ್ ಕುಮಾರ್ ಅವರಲ್ಲಿ ಒಬ್ಬರು ಆಡುವ ಸಾಧ್ಯತೆಯಿದೆ. ಇದನ್ನೂ ಓದಿ: ಭಾರತೀಯ T20 ತಂಡ:ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್‌, ಮೊಹಮ್ಮದ್ ಸಿರಾಜ್, ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...