ಆರ್‌ ಸಿ ಬಿ ತಂಡಕ್ಕೆ ರೋಹಿತ್ ಶರ್ಮಾ ನಾಯಕ!? ಮುಂಬೈ ತೊರೆದ ಹಿಟ್‌ ಮ್ಯಾನ್...‌ ಎಲ್ಲಾ ತಂಡಗಳಲ್ಲಿ ಢವಢವ ಶುರು : ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ ಸೂಪರ್ ಜೈಂಟ್‌ ಮತ್ತು ದೆಹಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಮೇಲೆ ಕಣ್ಣಿಟ್ಟಿದ್ದು, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ತಮ್ಮ ತಂಡಕ್ಕೆ ಸೇರ್ಪಡೆಗೊಳಿಸಲು ಕಸರತ್ತು ನಡೆಸುವ ಸಾಧ್ಯತೆ ಇದೆ. :ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಸೀಸನ್‌ʼಗೆ ಮುಂಚಿತವಾಗಿ ಮೆಗಾ ಹರಾಜಿಗೆ ಸಾಕ್ಷಿಯಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್‌ ತಂಡಗಳು ಸದ್ಯ ಉತ್ತಮ ನಾಯಕತ್ವದೊಂದಿದೆ ತೃಪ್ತವಾಗಿವೆ. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್‌ ತಂಡದಲ್ಲಿ ಹೊಸ ನಾಯಕನನ್ನು ಹುಡುಕುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ ಸೂಪರ್ ಜೈಂಟ್‌ ಮತ್ತು ದೆಹಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಮೇಲೆ ಕಣ್ಣಿಟ್ಟಿದ್ದು, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ತಮ್ಮ ತಂಡಕ್ಕೆ ಸೇರ್ಪಡೆಗೊಳಿಸಲು ಕಸರತ್ತು ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಕಳೆದ ತಿಂಗಳು T20 ವಿಶ್ವಕಪ್ ಗೆದ್ದ ನಂತರ ರೋಹಿತ್, ಆರ್‌ ಸಿ ಬಿ ತಂಡಕ್ಕೆ ಆಗಮಿಸಲಿದ್ದಾರೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಅಷ್ಟೇ ಅಲ್ಲದೆ, ಹೊಸ ನಾಯಕನಿಗಾಗಿ ಹುಡುಕಾಟ ನಡೆಸುತ್ತಿರುವ ಬೆಂಗಳೂರು ರೋಹಿತ್ʼಗೆ ಆ ಸ್ಥಾನ ನೀಡಲಿದೆ ಎಂದು ಹೇಳಲಾಗುತ್ತಿದೆ. ಒಂದು ಈ ವದಂತಿಯಂತೆಯೇ ರೋಹಿತ್‌ ಆರ್‌ ಸಿಬಿ ತಂಡದ ಕ್ಯಾಪ್ಟನ್‌ ಆದರೆ, ಕೊಹ್ಲಿ-ಶರ್ಮಾ ಜೋಡಿ ಐಪಿಎಲ್‌ʼನಲ್ಲಿ ಮೋಡಿ ಮಾಡೋದು ಗ್ಯಾರಂಟಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...