: ಇತಿಹಾಸ ಸೃಷ್ಟಿಗೆ ಎರಡೇ ಹೆಜ್ಜೆ ದೂರ... 'ಶತಕ'ಗಳ ಶ್ರೇಷ್ಠ ದಾಖಲೆಯತ್ತ ರೋಹಿತ್ ಶರ್ಮಾ ಚಿತ್ತ : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಆಗಸ್ಟ್ 2 ರಿಂದ ಆಗಸ್ಟ್ 7 ರವರೆಗೆ ಕೊಲಂಬೊದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಜುಲೈ 27ರಿಂದ ಜುಲೈ 30ರವರೆಗೆ ಭಾರತ ಮತ್ತು ಶ್ರೀಲಂಕಾ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. :ಮುಂದಿನ ತಿಂಗಳು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಲಿದ್ದಾರೆ. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್ʼನಲ್ಲಿ ಬಹುದೊಡ್ಡ ದಾಖಲೆ ನಿರ್ಮಿಸಲಿದ್ದಾರೆ. ಇದನ್ನೂ ಓದಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಆಗಸ್ಟ್ 2 ರಿಂದ ಆಗಸ್ಟ್ 7 ರವರೆಗೆ ಕೊಲಂಬೊದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಜುಲೈ 27ರಿಂದ ಜುಲೈ 30ರವರೆಗೆ ಭಾರತ ಮತ್ತು ಶ್ರೀಲಂಕಾ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ರೋಹಿತ್ ಶರ್ಮಾ ಈಗ ಟಿ 20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದು, ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ಮಾತ್ರ ಭಾರತಕ್ಕೆ ನಾಯಕರಾಗಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ವೇಳೆ ರೋಹಿತ್ ಶರ್ಮಾ ಎರಡು ಶತಕಗಳನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ 'ಶತಕ'ಗಳ ಶ್ರೇಷ್ಠ ದಾಖಲೆಯನ್ನು ರಚಿಸುತ್ತಾರೆ. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಶತಕ ಪೂರೈಸಲಿದ್ದಾರೆ. ಈ ಮೂಲಕ 'ಹಿಟ್‌ಮ್ಯಾನ್' ಭಾರತದ ಪರ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಇದುವರೆಗೆ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಮಾತ್ರ ಭಾರತದ ಪರ ಅಂತರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ 50ಕ್ಕೂ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿ 100 ಶತಕಗಳಿವೆ ಮತ್ತು ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 80 ಶತಕಗಳಿವೆ. ರೋಹಿತ್ ಶರ್ಮಾ ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 48 ಶತಕಗಳನ್ನು ಹೊಂದಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಇನ್ನೂ ಎರಡು ಶತಕಗಳನ್ನು ಗಳಿಸಿದರೆ, ಅವರು ವಿಶ್ವದ ಒಂಬತ್ತನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಅರ್ಧ ಶತಕ ಪೂರೈಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ 50+ ಶತಕಗಳನ್ನು ಗಳಿಸಿದ ಭಾರತೀಯರು 1. ಸಚಿನ್ ತೆಂಡೂಲ್ಕರ್ - 100 ಶತಕಗಳು (ಟೆಸ್ಟ್ - 51 ಮತ್ತು - 49) 2. ವಿರಾಟ್ ಕೊಹ್ಲಿ - 80 ಶತಕಗಳು (ಟೆಸ್ಟ್ - 29, - 50 ಮತ್ತು T20I - 1) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು 1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು 2. ವಿರಾಟ್ ಕೊಹ್ಲಿ (ಭಾರತ) - 80 ಶತಕಗಳು 3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 71 ಶತಕಗಳು 4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 63 ಶತಕಗಳು 5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 62 ಶತಕಗಳು 6. ಹಾಶಿಮ್ ಆಮ್ಲ (ದಕ್ಷಿಣ ಆಫ್ರಿಕಾ) - 55 ಶತಕಗಳು 7. ಮಹೇಲಾ ಜಯವರ್ಧನೆ (ಶ್ರೀಲಂಕಾ) - 54 ಶತಕಗಳು 8. ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್) - 53 ಶತಕಗಳು 9. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) - 49 ಶತಕಗಳು 10. ರೋಹಿತ್ ಶರ್ಮಾ (ಭಾರತ) - 48 ಶತಕಗಳು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ 1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು 2. ವಿರಾಟ್ ಕೊಹ್ಲಿ (ಭಾರತ) - 80 ಶತಕಗಳು 3. ರೋಹಿತ್ ಶರ್ಮಾ (ಭಾರತ) - 48 ಶತಕಗಳು 4. ರಾಹುಲ್ ದ್ರಾವಿಡ್ (ಭಾರತ) - 48 ಶತಕಗಳು 5. ವೀರೇಂದ್ರ ಸೆಹ್ವಾಗ್ (ಭಾರತ) - 38 ಶತಕಗಳು 6. ಸೌರವ್ ಗಂಗೂಲಿ (ಭಾರತ) - 38 ಶತಕಗಳು 7. ಸುನಿಲ್ ಗವಾಸ್ಕರ್ (ಭಾರತ) - 35 ಶತಕಗಳು 8. ಮೊಹಮ್ಮದ್ ಅಜರುದ್ದೀನ್ (ಭಾರತ) - 29 ಶತಕಗಳು 9. ಶಿಖರ್ ಧವನ್ (ಭಾರತ) - 24 ಶತಕಗಳು 10. ವಿವಿಎಸ್ ಲಕ್ಷ್ಮಣ್ (ಭಾರತ) - 23 ಶತಕಗಳು ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...