ಕ್ಯಾಪ್ಟನ್‌ ಆದ ನಂತರ ಸೂರ್ಯಕುಮಾರ್‌ ಯಾದವ್‌ ಫರ್ಸ್ಟ್‌ ರಿಯಾಕ್ಷನ್‌: ಇನ್ಸ್ಟಾಗ್ರಾಂನಲ್ಲಿ ಅಭಿಮಾನಿಗಳೊಂದಿಗೆ ನಾಯಕನ ಮನದಾಳದ ಮಾತು..! : ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ. :ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ಭಾರತ ಟಿ20 ತಂಡದ ನಾಯಕರಾಗಿ ಸೂರ್ಯ ಆಯ್ಕೆಯಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಾಕುಮಾರ್‌ ನಡುವೆ ನಾಯಕತ್ವದ ರೇಸ್‌ ನಡೆದಿತ್ತು ಅವರು ಕೊನೆಯ ಕ್ಷಣದಲ್ಲಿ ಸೂರ್ಯಕುಮಾರ್‌ ಅವರನ್ನು ನಾಯಕನನ್ನಾಗಿ ಆಯ್ಕೆಮಾಡುವ ಮೂಲಕ ಹಾರ್ದಿಕ್‌ ಪಾಂಡ್ಯ ಅವರನ್ನು ತಂಡದಿಂದ ಕೈಬಿಟ್ಟರು. ನಾಯಕನಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸೂರ್ಯಕುಮಾರ್ ಯಾದವ್, ಕಳೆದ ಕೆಲವು ವಾರಗಳು ಕನಸಿನಂತಿದೆ ಎಂದಿದ್ದಾರೆ. ಸೂರ್ಯಕುಮಾರ್ ಯಾದವ್ ಅವರು ತಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಸೂರ್ಯ ಟಿ20 ಸ್ವರೂಪದ ಪಂದ್ಯಗಳಿಗೆ ಭಾರತ ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ.33 ವರ್ಷದ ಬ್ಯಾಟ್ಸ್‌ಮನ್‌ಗೆ ಟಿ20 ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರಿಗಿಂತ ಹೆಚ್ಚು ಆದ್ಯತೆ ನೀಡಲಾಯಿತು. ಇದನ್ನೂ ಓದಿ: ನಾಯಕನಾದ ನಂತರ ಸೂರ್ಯಕುಮಾರ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 'ನಿಮ್ಮ ಪ್ರೀತಿ, ಬೆಂಬಲ ಮತ್ತು ಶುಭ ಹಾರೈಕೆಗಳಿಗೆ ತುಂಬಾ ಧನ್ಯವಾದಗಳು. ಕಳೆದ ಕೆಲವು ವಾರಗಳು ಕನಸಿಗಿಂತ ಕಡಿಮೆಯಿಲ್ಲ. ಇದೆಲ್ಲದಕ್ಕಾಗಿ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ' ಎಂದು ಸೂರ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ, 'ದೇಶಕ್ಕಾಗಿ ಆಡುವುದು ಅತ್ಯಂತ ವಿಶೇಷವಾದ ಭಾವನೆಯಾಗಿದ್ದು ಅದನ್ನು ಪದಗಳಲ್ಲಿ ವ್ಯಕ್ತಪಡಿಸಲು ಕಷ್ಟ. ಈ ಹೊಸ ಪಾತ್ರವು ಬಹಳಷ್ಟು ಜವಾಬ್ದಾರಿ ಮತ್ತು ಉತ್ಸಾಹವನ್ನು ತರುತ್ತದೆ. ಮುಂದೆಯೂ ನಾನು ನಿಮ್ಮ ಬೆಂಬಲ ಮತ್ತು ಆಶೀರ್ವಾದವನ್ನು ಪಡೆಯುತ್ತೇನೆ ಎಂದು ಭಾವಿಸುತ್ತೇನೆ' ಎಂದು ಪೋಸ್ಟ್‌ ಹಾಕಿದ್ದಾರೆ. ಸೂರ್ಯಕುಮಾರ್ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಕ್ಯಾಚ್ ಪಡೆಯುವ ಮೂಲಕ ಭಾರತದ ಗೆಲುವನ್ನು ಸುಲಭಗೊಳಿಸಿದರು. ಸೂರ್ಯ ಈ ಹಿಂದೆಯೂ ಭಾರತ ತಂಡದ ನಾಯಕರಾಗಿದ್ದರು. ಆದರೆ ಈ ಬಾರಿ ಅವರಿಗೆ ನಿತ್ಯವೂ ಈ ಜವಾಬ್ದಾರಿ ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...