: ರೋಹಿತ್‌, ಹಾರ್ದಿಕ್‌ ಅಲ್ಲ.. ಶ್ರೀಲಂಕಾ ಪ್ರವಾಸಕ್ಕೆ ಇವರೇ ನಾಯಕ..! : ಈ ತಿಂಗಳ ಅಂತ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಆತಿಥೇಯ ಶ್ರೀಲಂಕಾ ತಂಡದ ವಿರುದ್ಧ ಟೀಂ ಇಂಡಿಯಾ 3 ಮತ್ತು 3 T20 ಸರಣಿಗಳನ್ನು ಆಡಲಿದ್ದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಈಗಾಗಲೇ ಈ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. :ಈ ತಿಂಗಳ ಅಂತ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಆತಿಥೇಯ ಶ್ರೀಲಂಕಾ ತಂಡದ ವಿರುದ್ಧ ಟೀಂ ಇಂಡಿಯಾ 3 ಮತ್ತು 3 T20 ಸರಣಿಗಳನ್ನು ಆಡಲಿದ್ದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ() ಈಗಾಗಲೇ ಈ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೂರು ಟಿ20 ಸರಣಿಗಳು ಇದೇ ತಿಂಗಳ 26ರಿಂದ ಆರಂಭವಾಗಲಿದ್ದು, ಮೂರು ಪಂದ್ಯದ ಏಕದಿನ ಸರಣಿ ಆಗಸ್ಟ್ 1 ರಿಂದ ಆರಂಭವಾಗಲಿವೆ. ಟಿ20 ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾದರೆ, ಏಕದಿನ ಪಂದ್ಯಗಳು ಮಧ್ಯಾಹ್ನ 2.30ಕ್ಕೆ ಆರಂಭವಾಗಲಿವೆ. ಈ ಪ್ರವಾಸದೊಂದಿಗೆ ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ತಮ್ಮ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್(T20 ) ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡು, ಐದು ಟಿ20 ಸರಣಿಗಳನ್ನು 4-1 ಅಂಕಗಳಿಂದ ಅಂತರ ಕಾಯ್ದುಕೊಳ್ಳುವ ಮೂಲಕ ಗೆಲುವು ಸಾಧಿಸಿತು. ಟಿ 20 ವಿಶ್ವಕಪ್‌ ಗೆದ್ದ ಹಿರಿಯ ಆಟಗಾರರಿಗೆ ಜಿಂಬಾಬ್ವೆ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿತ್ತು. ಇದೇ ಕಾರಣದಿಂದ ಶುಭಮನ್‌ ನಾಯಕತ್ವದಲ್ಲಿ ಭಾರತ ತಂಡ ಜಿಂಬಾಬ್ವೆ ಪ್ರವಾಸ ಕೃಗೊಂಡಿತ್ತು. ಆದರೆ, ಇದೀಗ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದ ಪ್ರಮುಖ ಆಟಗಾರರನ್ನು ಒಳಗೊಂಡ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಎಲ್ಲಾ ಹಿರಿಯ ಆಟಗಾರರು ಈ ಪ್ರವಾಸದಲ್ಲಿ ಇರಲೇಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದಾಗ್ಯೂ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ಪ್ರವಾಸದಿಂದ ಗೈರುಹಾಜರಾಗಲಿದ್ದಾರೆ. ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆಯಂತೆ. ರೋಹಿತ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಪ್ರವಾಸದಿಂದ ದೂರ ಉಳಿಯಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ. ಈ ಪಟ್ಟಿಗೆ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಸೇರ್ಪಡೆಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಂದ ಶ್ರೀಲಂಕಾದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ದೂರ ಉಳಿಯಲಿದ್ದಾರೆ ಎಂದು ಸ್ವತಹಃ ಅವರೇ ಬಿಸಿಸಿಐಗೆ ಸೂಚಿಸಿದ್ದಾರೆ ಎಂಬ ವರದಿಗಳಿವೆ. ಅದಕ್ಕೆ ಬಿಸಿಸಿಐ ಕೂಡ ಒಪ್ಪಿಗೆ ಕೊಟ್ಟಿದೆಯಂತೆ. ಇದನ್ನೂ ಓದಿ: ವೈಯಕ್ತಿಕ ಕಾರಣಗಳಿಂದ ಹಾರ್ದಿಕ್ ಪಾಂಡ್ಯ ಏಕದಿನ ಸರಣಿಯಿಂದ ದೂರ ಉಳಿಯಲಿದ್ದಾರೆ. ಅವರಿಗೆ ಯಾವುದೇ ಫಿಟ್ನೆಸ್ ಸಮಸ್ಯೆ ಇಲ್ಲ. ಹಾರ್ದಿಕ್ ಗಾಯಗೊಂಡಿದ್ದಾರೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ದೂರವಾದ ನಂತರ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ? ಎನ್ನು ಚರ್ಚೆ ಶುರುವಾಗಿದೆ. ರೋಹಿತ್ ಮತ್ತು ಹಾರ್ದಿಕ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅಥವಾ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರಾಹುಲ್ ಟೀಂ ಇಂಡಿಯಾ ನಾಯಕರಾಗಿದ್ದರು. ಇನ್ನೂ, ಶುಭಮನ್ ಗಿಲ್ ಇತ್ತೀಚಿಗೆ ಮುಕ್ತಾಯಗೊಂಡ ಜಿಂಬಾಬ್ವೆ ಪ್ರವಾಸಕ್ಕೆ ನಾಯಕರಾಗಿದ್ದರು. ಶುಭಮನ್ ಗಿಲ್‌ಗೆ ಏಕದಿನ ಮಾದರಿಯಲ್ಲಿ ನಾಯಕನಾಗಿ ಯಾವುದೇ ಅನುಭವವಿಲ್ಲ. ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಲಿದ್ದಾರೆ ಎಂಬ ಪ್ರಚಾರ ಗರಿಗೆದರಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...