ಬಿಸಿಸಿಐ ವಿರುದ್ಧ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಫುಲ್‌ ಗರಂ..! : ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ. ಇದೇ ಕಾರಣಕ್ಕೆ ಇದೀಗ, ಬಿಸಿಸಿಐ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿಡಿಕಾರಿದೆ. :ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ. ಇದೇ ಕಾರಣಕ್ಕೆ ಇದೀಗ, ಬಿಸಿಸಿಐ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿಡಿಕಾರಿದೆ. 2008ರ ನಂತರ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನದ ಪ್ರವಾಸ ಕೈಗೊಳ್ಳುವುದನ್ನು ನಿಲ್ಲಿಸಿದೆ. ಅಂದಿನಿಂದ ಇಂದಿನವರೆಗೂ ಭಾರತ ಮತ್ತು ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಆಡಿಲ್ಲ. ಏಷ್ಯಾಕಪ್, ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯಂತಹ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗಿವೆ. ಇದನ್ನೂ ಓದಿ: ಈ ಪರಿಸ್ಥಿತಿಯಲ್ಲಿ ಪಾಕಿಸ್ತಾನವು 2025 ರ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಸರಣಿಯನ್ನು ಆಯೋಜಿಸುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಸುದೀರ್ಘ ಸಮಯದ ನಂತರ ವಿಶ್ವ ದರ್ಜೆಯ ಕ್ರಿಕೆಟ್ ಸರಣಿಯನ್ನು ಆಯೋಜಿಸಲು ಫುಲ್‌ ಜೋಶ್‌ನಲ್ಲಿದೆ. ಈ ಸರಣಿಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಕ್ರಿಕೆಟ್ ಮೈದಾನಗಳನ್ನು ಸಜ್ಜುಮಾಡುತ್ತಿದೆ. ಅದಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಈಗಿರುವಾಗ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಾವಸ ಹೋಗದಂತೆ ಬೇರೆಡೆ ಪಂದ್ಯವನ್ನು ಆಯೋಜಿಸಬೇಕು ಎಂದು ಬಿಸಿಸಿಐ ಐಸಿಸಿಗೆ ಒತ್ತಡ ಹೇರಿತ್ತಿದೆ. ಭಾರತ ತಂಡ ಆಡಲಿರುವ ಪಂದ್ಯಗಳನ್ನು ಮಾತ್ರ ಯುನೈಟೆಡ್ ಅರಬ್ ಎಮಿರೇಟ್ಸ್ ಅಥವಾ ಶ್ರೀಲಂಕಾದಂತಹ ದೇಶಗಳಿಗೆ ಸ್ಥಳಾಂತರಿಸುವಂತೆ ಬಿಸಿಸಿಐ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ 2023ರ ಏಷ್ಯಾಕಪ್ ಕ್ರಿಕೆಟ್ ಸರಣಿಯಲ್ಲೂ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ಆಗಲೂ ಭಾರತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ ಸರಣಿಯಲ್ಲಿ ಭಾಗವಹಿಸಲು ನಿರಾಕರಿಸಿದ್ದರಿಂದ ಭಾರತ ತಂಡ ಆಡಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿತ್ತು. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮತ್ತು ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಜಂಟಿಯಾಗಿ 2025ರ ಚಾಂಪಿಯನ್ಸ್ ಟ್ರೋಫಿ ಸರಣಿಯನ್ನು ಆಯೋಜಿಸುತ್ತಿದ್ದು, ಬೇರೆ ದೇಶಕ್ಕೆ ಸ್ಥಳಾಂತರಿಸಲು ಬಿಸಿಸಿಐ ಮುಂದಾಗುತ್ತಿರುವುದರಿಂದ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಆಕ್ರೋಶಗೊಂಡಿದೆ. ಇದನ್ನೂ ಓದಿ: ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು, "ನಾವು ಕ್ರಿಕೆಟ್‌ ಮೈದಾನವನ್ನು ನವೀಕರಿಸಲು ಕೋಟಿಗಟ್ಟಲೇ ಖರ್ಚು ಮಾಡುತ್ತಿದ್ದೇವೆ. ಚಾಂಪಿಯನ್ಸ್ ಟ್ರೋಫಿ ಸರಣಿಯನ್ನು ಪಾಕಿಸ್ತಾನದಿಂದ ಹೊರಗೆ ನಡೆಸಲು ನಾವು ಖಂಡಿತವಾಗಿಯೂ ಒಪ್ಪುವುದಿಲ್ಲ. ಭಾರತ ಯಾವುದೇ ನಿರ್ಧಾರ ತೆಗೆದುಕೊಂಡರೂ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿಯೇ ನಡೆಯಲಿದೆ." ಭಾರತ ತಂಡವು ಪಾಕಿಸ್ತಾನಕ್ಕೆ ತೆರಳಿ ಚಾಂಪಿಯನ್ಸ್ ಟ್ರೋಫಿ ಸರಣಿಯಿಂದ ಹಿಂದೆ ಸರಿಯಲು ನಿರಾಕರಿಸಿದರೆ, ಈ ಸರಣಿಯು ಭಾರಿ ನಷ್ಟವನ್ನು ಅನುಭವಿಸುತ್ತದೆ. ಭಾರತ ತಂಡವು ಭಾಗವಹಿಸದಿದ್ದರೆ, ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಜಾಹೀರಾತು ಆದಾಯ ಇತ್ಯಾದಿಗಳ ವಿಷಯದಲ್ಲಿ ಭಾರಿ ನಷ್ಟವನ್ನು ಎದುರಿಸಬೇಕಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...