ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ 11 ಆಯ್ಕೆ ಮಾಡಿದ ಯುವರಾಜ್ ಸಿಂಗ್: ಸ್ನೇಹಿತನಿಗೇ ಇಲ್ಲ ಈ ತಂಡದಲ್ಲಿ ಸ್ಥಾನ!? , : ಯುವರಾಜ್ ಸಿಂಗ್ ಆಡುವ ಹನ್ನೊಂದರಲ್ಲಿ ತಮ್ಮ ಕಾಲದ ಮತ್ತು ಈಗಿನ ಕಾಲದ ಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ, ಈ ಪ್ಲೇಯಿಂಗ್ 11ನಲ್ಲಿ ಮಹೇಂದ್ರ ಸಿಂಗ್ ಧೋನಿಯ ಹೆಸರು ಸೇರಿಲ್ಲ. , :ಭಾರತವನ್ನು 2 ವಿಶ್ವಕಪ್‌’ಗಳಲ್ಲಿ ಗೆಲ್ಲುವಂತೆ ಮಾಡಿದ ಮಾಜಿ ಆಲ್‌ ರೌಂಡರ್ ಯುವರಾಜ್ ಸಿಂಗ್, ವಿಶ್ವ ಕ್ರಿಕೆಟ್‌’ನ ಅನೇಕ ಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸಾರ್ವಕಾಲಿಕ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್ ಸೂಚಿಸಿದ್ದಾರೆ. ಆಡುವ ಹನ್ನೊಂದರಲ್ಲಿ ತಮ್ಮ ಕಾಲದ ಮತ್ತು ಈಗಿನ ಕಾಲದ ಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ, ಈ ಪ್ಲೇಯಿಂಗ್ 11ನಲ್ಲಿ ಮಹೇಂದ್ರ ಸಿಂಗ್ ಧೋನಿಯ ಹೆಸರು ಸೇರಿಲ್ಲ. ಇದನ್ನೂ ಓದಿ: ಟಿವಿ ನಿರೂಪಕಿ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಶೆಫಾಲಿ ಬಗ್ಗಾ ಅವರೊಂದಿಗಿನ ಸಂದರ್ಶನದಲ್ಲಿ, ಯುವರಾಜ್ ಸಿಂಗ್ ತಮ್ಮ ಸಾರ್ವಕಾಲಿಕ ಅತ್ಯುತ್ತಮ ಪ್ಲೇಯಿಂಗ್ 11 ಅನ್ನು ಘೋಷಿಸಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್ ಆಗಿ ಯುವರಾಜ್ ಸಿಂಗ್ ಆಡುವ ಹನ್ನೊಂದರಲ್ಲಿ ಸಚಿನ್ ತೆಂಡೂಲ್ಕರ್‌’ಗೆ ಸ್ಥಾನ ನೀಡಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ಆರಂಭಿಕ ಪಾಲುದಾರರಾಗಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಯ್ಕೆ ಮಾಡಿದ್ದಾರೆ. ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಮತ್ತು ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಆಯ್ಕೆಯಾಗಿದ್ದಾರೆ. ಯುವರಾಜ್ ಸಿಂಗ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರನ್ನು ಆಯ್ಕೆ ಮಾಡಿದ್ದಾರೆ. ಆಡಮ್ ಗಿಲ್‌ಕ್ರಿಸ್ಟ್ 6ನೇ ಕ್ರಮಾಂಕ ಮತ್ತು ವಿಕೆಟ್‌ ಕೀಪರ್ ಪಾತ್ರಕ್ಕೆ ಆಯ್ಕೆ ಮಾಡಿದ್ದಾರೆ. ಯುವರಾಜ್ ಸಿಂಗ್, ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ನಂಬರ್ 7 ಮತ್ತು ಆಲ್ ರೌಂಡರ್ ಪಾತ್ರಕ್ಕೆ ಆಯ್ಕೆ ಮಾಡಿದ್ದಾರೆ. ಇನ್ನು ಶ್ರೇಷ್ಠ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಮತ್ತು ಶೇನ್ ವಾರ್ನ್ ಅವರನ್ನು ಸ್ಪಿನ್ ಬೌಲರ್‌’ಗಳಾಗಿ ಸೇರಿಸಿಕೊಂಡಿದ್ದಾರೆ. ಜೊತೆಗೆ ವಾಸಿಂ ಅಕ್ರಮ್ ಮತ್ತು ಗ್ಲೆನ್ ಮೆಕ್‌ ಗ್ರಾತ್ ಅವರನ್ನು ವೇಗದ ಬೌಲರ್‌’ಗಳಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ಯುವರಾಜ್ ಸಿಂಗ್ ಆಯ್ಕೆ ಮಾಡಿದ ಸಾರ್ವಕಾಲಿಕ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್: ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಆಡಮ್ ಗಿಲ್‌ಕ್ರಿಸ್ಟ್ (ವಿಕೆಟ್ ಕೀಪರ್), ಆಂಡ್ರ್ಯೂ ಫ್ಲಿಂಟಾಫ್, ಶೇನ್ ವಾರ್ನ್, ಮುತ್ತಯ್ಯ ಮುರಳೀಧರನ್, ಗ್ಲೆನ್ ಮೆಕ್‌ಗ್ರಾತ್, ವಾಸಿಂ ಅಕ್ರಮ್, ಯುವರಾಜ್ ಸಿಂಗ್ (12ನೇ ಆಟಗಾರ) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...