: ದರ್ಶನ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, 17 ಆರೋಪಿಗಳು.. 231 ಸಾಕ್ಷಿ.. 3991 ಪುಟಗಳಲ್ಲಿ ಇದೆ ಈ ಎಲ್ಲ ಅಂಶ ! : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹಾಗೂ ಸಹಚರರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 3991 ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ಸೆಪ್ಟೆಂಬರ್ 4 ರ ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋಟ್‌ನಲ್ಲಿ ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಈ ಕೊಲೆ ಪ್ರಕರಣದ ನಲ್ಲಿ ಪವಿತ್ರಾ ಗೌಡ A1 ಮತ್ತು ದರ್ಶನ್‌ A2 ಆಗಿದ್ದರು. ಅನೇಕರು ಇದು ಬದಲಾಗಬಹುದೆಂದು ಭಾವಿಸಿದ್ದರು. ಆದರೆ ಚಾರ್ಜ್‌ ಶೀಟ್‌ ನಲ್ಲಿಯೂ ಪವಿತ್ರಾ ಗೌಡ A1 ಮತ್ತು ದರ್ಶನ್‌ A2 ಎಂದೇ ದಾಖಲಿಸಿದ್ದಾರೆ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ಈ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 17 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಪೊಲೀಸರು ಇಟ್ಟಿದ್ದಾರೆ. ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಫ್ಎಸ್ಎಲ್ ಮತ್ತು ಸಿಎಫ್ಎಸ್ ನ 8 ವರದಿಗಳು, 27 ಜನರ 164 ಹೇಳಿಕೆ, 8 ಇತರೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ, 56 ಜನ ಪೊಲೀಸರು, 59 ಪಂಚರ ಸಮಕ್ಷಮದಲ್ಲಿ ಮಹಜರು ಸೇರಿ ಈ ಪ್ರಕರಣದಲ್ಲಿ ಒಟ್ಟು 231 ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಸಿಆರ್‌ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್‌ ಶೀಡ್ ಸಲ್ಲಿಕೆ ಮಾಡಲಾಗಿದ್ದು,ಕೊಲೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈ ಪ್ರಕರಣದಲ್ಲಿ ವಿಶೇಷ ಕೋರ್ಟ್‌ಗಾಗಿ ಪೊಲೀಸರು ಸರ್ಕಾರದ ಎದುರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...