ಚಿತ್ರೀಕರಣ ಮುಗಿಸಿದ "ಯಲಾಕುನ್ನಿ" ಮೇರಾ ನಾಮ್ ವಜ್ರಮುನಿ :ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್ ಈಗಾಗಲೇ ಚಿತ್ರೀಕರಣ ಮುಗಿಸಿರುವ ಯಲಾ ಕುನ್ನಿ ಚಿತ್ರ ತಂಡ ಸದ್ಯದಲ್ಲಿಯೇ ಸಿನಿಮಾ ಬಿಡುಗಡೆಗೆ ತಯಾರಿ ನಡೆಸಿದೆ. ಬೆಂಗಳೂರು :‘ಯಲಾಕುನ್ನಿ’ಈ ಡೈಲಾಗ್ ಅನ್ನು ಕನ್ನಡ ಚಿತ್ರಪ್ರೇಮಿಗಳು ಅದು ಹೇಗೆ ಮರೆಯಲು ಸಾಧ್ಯ ಹೇಳಿ.ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ಇದು.ಈ ಡೈಲಾಗ್ ಅನ್ನೇ ಸಿನಿಮಾ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿತ್ತು ‘ಯಲಾಕುನ್ನಿ’ ಚಿತ್ರತಂಡ. ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್,ಸಹನ ಮೂರ್ತಿ ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ ಪ್ರದೀಪ್ ಕಥೆ, ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.ಸದ್ಯ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಳಿಸಿರುವ "ಯಲಾಕುನ್ನಿ" ಚಿತ್ರಕ್ಕೆ ಚಿತ್ರೀಕರಣ ನಂತರದ ಚಟುವಟಿಕೆಗಳು(ಪೋಸ್ಟ್ ಪ್ರೊಡಕ್ಷನ್) ಬಿರುಸಿನಿಂದ ಸಾಗಿದೆ‌.ಸದ್ಯದಲ್ಲೇ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡಲು ಚಿತ್ರಮಂದಿರಗಳಿಗೆ "ಯಲಾಕುನ್ನಿ" ಚಿತ್ರ ಬರಲಿದೆ‌.ಬೆಂಗಳೂರು,ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ.ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು. ಇದನ್ನೂ ಓದಿ : ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌.ಕೋಮಲ್ ಅವರ ಜೊತೆಗೆ ದೊಡ್ಡ ದೊಡ್ಡ ಕಲಾವಿದರ ದಂಡು ಚಿತ್ರದಲ್ಲಿದೆ.ದತ್ತಣ್ಣ, ಸಾಧು ಕೋಕಿಲ,ಮಿತ್ರ, ಸುಚೇಂದ್ರ ಪ್ರಸಾದ್,ಶಿವರಾಜ್ ಕೆ ಆರ್ ಪೇಟೆ,ತಬಲಾ ನಾಣಿ,ರಾಜು ತಾಳಿ ಕೋಟೆ, ಸುಮನ್ ನಗರ ಕರ್,ಮಾನಸಿ ಸುಧೀರ್(ಕಾಂತಾರ),ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್,ಜಯಸಿಂಹ ಮುಸುರಿ,ರಘು ರಾಮನಕೊಪ್ಪ, ಮಹಾಂತೇಶ್, ಬೌಬೌ ಜಯರಾಮ್,ನಿರ್ದೇಶಕ ಸಹನ ಮೂರ್ತಿ,ಭಜರಂಗಿ ಪ್ರಸನ್ನ, ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ. ವಿಶೇಷ ವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ.ಮಯೂರ್ ಪಟೇಲ್ ಖಳ ನಾಯಕನಾಗಿ ನಟಿಸಿದ್ದಾರೆ. ಇದನ್ನೂ ಓದಿ : ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ.ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ."ಯಲಾಕುನ್ನಿ" ಚಿತ್ರಕ್ಕೆ 'ಮೇರಾ ನಾಮ್ ವಜ್ರಮುನಿ' ಎಂಬ ಅಡಿಬರಹವಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...