: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ಗೆ ಸಾಲು ಸಾಲು ಕಷ್ಟಗಳು.. ʼಆʼ ವಿಶೇಷ ಸೌಲಭ್ಯಕ್ಕಾಗಿ ಅಧಿಕಾರಿಗಳಿಗೆ ಮನವಿ! : ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪರಪ್ಪ ಅಗ್ರಹಾರ ಜೈಲಿಗೆ ಬಂದಾಗ ದರ್ಶನ್ ಅವರಿಗೆ ಕೆಲ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ ಅವರಿಗೆ ಕೆಲವು ವಿಶೇಷ ಸೌಲಭ್ಯಗಳನ್ನು ನೀಡುವಂತೆ ಮನವಿ ಮಾಡಲಾಗಿದೆ.. : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪರಪ್ಪ ಅಗ್ರಹಾರ ಜೈಲಿಗೆ ಬಂದಾಗ ದರ್ಶನ್ ಅವರಿಗೆ ಕೆಲ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ ಅವರಿಗೆ ಕೆಲವು ವಿಶೇಷ ಸೌಲಭ್ಯಗಳನ್ನು ನೀಡಲಾಗಿತ್ತು.. ಇದೀಗ ದರ್ಶನ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಬಳ್ಳಾರಿ ಜೈಲು ಅಧಿಕಾರಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ದರ್ಶನ್ ಬಳ್ಳಾರಿ ಜೈಲಿನ 15ನೇ ಬ್ಯಾರಕ್‌ನಲ್ಲಿದ್ದಾರೆ. ಇದು ವಿಶೇಷ ಭದ್ರತಾ ಬ್ಯಾರಕ್ ಆಗಿದೆ. ಆದರೆ ಈ ಬ್ಯಾರಕ್ ಮಾತ್ರ ಸರಳ ಶೌಚಾಲಯ ಹೊಂದಿದೆ. ಇದು ದರ್ಶನ್‌ಗೆ ಸಮಸ್ಯೆಯಾಗಿ ಪರಿಣಮಿಸಿದೆ. ಬೆನ್ನು ನೋವು ಹಾಗೂ ಎಡಗೈ ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಭಾರತೀಯ ಶೈಲಿಯ ಶೌಚಾಲಯ ಬಳಸಲು ಕಷ್ಟವಾಗುತ್ತಿದೆ. 'ನನಗೆ ಬೆನ್ನು ನೋವು ಮತ್ತು ತೋಳು ನೋವು ಇದೆ. ಭಾರತೀಯ ಶೌಚಾಲಯವನ್ನು ಬಳಸುವುದು ತುಂಬಾ ಕಷ್ಟ. ಈ ಬ್ಯಾರಕ್‌ನಲ್ಲಿ ಮಾಡರ್ನ್‌ ಶೌಚಾಲಯ ಅಥವಾ ಕನಿಷ್ಠ ಸರ್ಜಿಕಲ್ ಕುರ್ಚಿಯನ್ನು ಒದಗಿಸುವಂತೆ ದರ್ಶನ್ ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ... ಈ ಬಗ್ಗೆ ಕಾರಾಗೃಹ ಸಿಬ್ಬಂದಿ, ಕಾರಾಗೃಹದ ಮೇಲಧಿಕಾರಿಗಳು ಹಾಗೂ ವೈದ್ಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗುತ್ತಿದೆ.. ಇದನ್ನೂ ಓದಿ- ಮಾಡರ್ನ್ ಶೈಲಿಯ ಶೌಚಾಲಯಗಳನ್ನು ವರ್ಷಗಳಿಂದ ಬಳಸುತ್ತಿರುವವರಿಗೆ ಅದರಲ್ಲೂ ಅಧಿಕ ತೂಕ ಇರುವವರಿಗೆ ಭಾರತೀಯ ಶೈಲಿಯ ಶೌಚಾಲಯಗಳನ್ನು ಬಳಸುವುದು ತುಂಬಾ ಕಷ್ಟದ ಕೆಲಸ. ಇದರ ಜೊತೆಗೆ ದರ್ಶನ್ ಗೆ ಬೆನ್ನು ನೋವು, ಸೊಂಟ ನೋವು, ಎಡಗೈ ನೋವು ಕಾಣಿಸಿಕೊಂಡಿದ್ದು, ಈ ಕಾರಣದಿಂದ ಈ ವಿಷೇಶ ಮನವಿ ಮಾಡಲಾಗಿದೆ ಎಂದು ಬರದಿಯಾಗಿದೆ.. ದರ್ಶನ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಪರಪ್ಪ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಕುರ್ಚಿ ಮೇಲೆ ಕುಳಿತು ಸಿಗರೇಟ್ ಸೇದುತ್ತಾ ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿತ್ತು.. ಫೋಟೋ ವೈರಲ್ ಆಗುತ್ತಿದ್ದಂತೆಯೇ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಅದೇ ಜೈಲಿನಲ್ಲಿ ಇರಿಸಲಾಗಿತ್ತು. ಇದನ್ನೂ ಓದಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...