ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ ಚಿತ್ರದ ಫಸ್ಟ್‌ ಲುಕ್ ಟೀಸರ್ ಬಿಡುಗಡೆ : ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. :ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಇದನ್ನೂ ಓದಿ: ಟೀಸರ್ ನಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಸಕಲೇಶ ಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್ ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...