: ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ ಎಂದ ನಟ ದರ್ಶನ್‌! : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ. :ನನ್ನ ಜೊತೆಗಿದ್ದ ಹುಡುಗರಿಂದಲೇ ನಾನು ಹಾಳಾದೆ ಅಂತಾ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರಂತೆ. ಸದ್ಯ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿರುವ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಈ ಪ್ರಕರಣದ ತನಿಖೆ ವೇಳೆ ಪೊಲೀಸರ ಮುಂದೆಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ. ನಟ ದರ್ಶನ್‌ ಗೆಳತಿ ಪವಿತ್ರಾಗೌಡ ಈಗ ಉಲ್ಟಾ ಹೊಡೆಯುತ್ತಿದ್ದಾಳೆ ಎನ್ನಲಾಗಿದ್ದು, ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಇದನ್ನೂ ಓದಿ: ದರ್ಶನ್‌ ಗೆಳತಿ ಪವಿತ್ರಾಗೌಡಳಿಂದಲೇ ಪ್ರಕರಣ ಈ ಹಂತಕ್ಕೆ ಬಂದು ನಿಂತಿದೆ ಅಂತಾ ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲಡೆ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಆಕೆಯಿಂದಲೇ ಇಂದು ನಟ ದರ್ಶನ್‌ ಜೀವನ ಹಾಳಾಗಿದೆ ಅಂತಲೂ ಮಾತನಾಡಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಬೆಂಗಳೂರಿನ ಪಟ್ಟಣಗೆರೆ ಶೆಡ್, ದರ್ಶನ್, ಪವಿತ್ರಾಗೌಡ ಮನೆ, ಸ್ಟೂನಿ ಬ್ರೂಕ್ ಹೋಟೆಲ್, ಮೈಸೂರಿನ ಹೋಟೆಲ್, ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಮನೆ, ಆರೋಪಿಗಳ ಮನೆ ಇನ್ನಿತರೆ ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ತನಿಖಾಧಿಕಾರಿಗಳು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ. ನಟ ದರ್ಶನ್‌ ಗೆಳತಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್​ ಅಂಡ್‌ ಗ್ಯಾಂಗ್ ಜೈಲು ಪಾಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...