ಸೂಪರ್ ಸ್ಟಾರ್ ʼಕೂಲಿʼ ಫೀಲ್ಡ್‌ಗೆ ರಿಯಲ್ ಸ್ಟಾರ್ ಎಂಟ್ರಿ..! ರಜನಿ-ಉಪ್ಪಿ ಒಂದೇ ಸಿನಿಮಾದಲ್ಲಿ.. : ಒಂದು ಕಡೆ ವೆಟ್ಟೈಯಾನ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದರೆ, ಇನ್ನೊಂದು ಕಡೆ ಕೂಲಿ ಸಿನಿಮಾದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ಬ್ಯುಸಿಯಾಗಿದ್ದಾರೆ.. ಈ ಚಿತ್ರಗಳ ಮೇಲೆ ಈಗಾಗಲೇ ಭಾರೀ ನಿರೀಕ್ಷೆಗಳಿವೆ. ಟಿ.ಜೆ. ಜ್ಞಾನವೇಲ್ ನಿರ್ದೇಶನದ ವೆಟ್ಟೈಯಾನ್ ಚಿತ್ರದಲ್ಲಿ ರಜನಿಕಾಂತ್, ಅಮಿತಾಬ್ ಬಚ್ಚನ್, ಫಹದ್ ಫಾಜಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್ ಮತ್ತು ರಿತಿಕಾ ಸಿಂಗ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. :ವೆಟ್ಟೈಯಾನ್ ಸಿನಿಮಾ ಅಲ್ಲದೆ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಕೂಲಿ ಸಿನಿಮಾಗಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇದರಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಆದರೆ ಇದೀಗ ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಪ್‌ಡೇಟ್‌ ಒಂದು ಸಿನಿಮಾ ವಲಯದಲ್ಲಿ ಹರಿದಾಡುತ್ತಿದೆ. ಹೌದು.. ಇತ್ತೀಚಿನ ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದುವರೆಗೂ ಕೂಲಿ ಚಿತ್ರದಲ್ಲಿ ಉಪ್ಪಿ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಇತ್ತು. ಆದರೆ ಇದೀಗ ಅಧಿಕೃತವಾಗಿ ಘೋಷಣೆಯಾಗಿದ್ದು, ಪೋಸ್ಟರ್‌ ಕೂಡ ಬಿಡುಗಡೆಯಾಗಿದೆ. ಇದನ್ನೂ ಓದಿ: ಪೋಸ್ಟರ್‌ನಲ್ಲಿ ಉಪೇಂದ್ರ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಹೈಪ್ ಮತ್ತಷ್ಟು ಹೆಚ್ಚಿಸಿದೆ. ಉಪ್ಪಿ ತಮ್ಮ ಸಿನಿಮಾ ಜೀವನದಲ್ಲಿ ಮೊದಲ ಬಾರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಉಪ್ಪಿಯ ಈ ಲುಕ್ ನೋಡಿದ್ರೆ ಸೂಪರ್‌ ಸ್ಟಾರ್‌ಗೆ ರಿಯಲ್‌ ಸ್ಟಾರ್‌ ವಿಲನ್‌ ಆಗ್ತಾರಾ ಎನ್ನುವ ಸಂಶಯ ಮೂಡಿಸುತ್ತಿದೆ.. ಕೂಲಿ ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮೊದಲು ತಲೈವಾ 171 ಅನ್ನೋ ಶೀರ್ಷಿಕೆ ಇಡಲಾಗಿತ್ತು. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ, ಗಿರೀಶ್ ಗಂಗಾಧರನ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸಧ್ಯ ರಿಯಲ್ ಸ್ಟಾರ್ ಉಪೇಂದ್ರ ಯುಐ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...