ವಿನೋದ್ ಪ್ರಭಾಕರ್ ಅಭಿನಯದ "ಬಲರಾಮನ ದಿನಗಳು" ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್! ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ "ಬಲರಾಮನ ದಿನಗಳು" ಸಿನಿಮಾ ಬಗ್ಗೆ ಚಿತ್ರ ತಂಡ ಬಿಗ್‌ ಅನೌನ್ಸ್‌ಮೆಂಟ್‌ ಮಾಡಲಿದೆ. :ʻಆ ದಿನಗಳುʼ ಖ್ಯಾತಿಯ ಕೆ.ಎಂ ಚೈತನ್ಯ ನಿರ್ದೇಶನದ ಮತ್ತು ಪದ್ಮಾವತಿ ಫಿಲಂಸ್ ನಿರ್ಮಾಣದ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ "ಬಲರಾಮನ ದಿನಗಳು" ಸಿನಿಮಾ ಬಗ್ಗೆ ಚಿತ್ರ ತಂಡ ಬಿಗ್‌ ಅನೌನ್ಸ್‌ಮೆಂಟ್‌ ಮಾಡಲಿದೆ. ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ "ಬಲರಾಮನ ದಿನಗಳು" ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‌ ಅಡಿಯಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ನಿರ್ಮಾಣ‌ ಮಾಡುತ್ತಿದ್ದಾರೆ. "ಆ ದಿನಗಳು" ಖ್ಯಾತಿಯ ಕೆ‌.ಎಂ.ಚೈತನ್ಯ ರವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ: ಕೆಲವು ದಿನಗಳ ಹಿಂದಷ್ಟೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಚಿತ್ರದ ಮೊದಲ ಪೋಸ್ಟರ್ ಎಲ್ಲರ ಗಮನ ಸೆಳೆದಿತ್ತು. ಆಗಸ್ಟ್ 23 ರಂದು "ಬಲರಾಮನ ದಿನಗಳು" ಚಿತ್ರದ ಕುರಿತು ಬಿಗ್ ಅನೌನ್ಸ್ ಮೆಂಟ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಅದೇನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿದೆ. ಒಟ್ಟಿನಲ್ಲಿ ಪದ್ಮಾವತಿ ಫಿಲಂಸ್ ನಿರ್ಮಾಣದ, ಕೆ.ಎಂ.ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...