ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆಗೆ ಮುದ್ದಾದ ಹೆಣ್ಣು ಮಗು ಜನನ..!? ತಾಯಿ-ಮಗುವಿನ ವಿಡಿಯೋ ವೈರಲ್‌ - : ದೀಪಿಕಾ ಗರ್ಭಿಣಿಯಾದಾಗಿನಿಂದ ಒಂದಲ್ಲ ಒಂದು ವದಂತಿ ಹರಿದಾಡುತ್ತಲೇ ಇವೆ. ಇತ್ತೀಚೆಗೆಯಷ್ಟೇ ದೀಪಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಫೇಕ್‌ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ವೈರಲ್‌ ಆಗಿದ್ದು, ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. - :ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದಿಂದಲೇ ಆಗ್ಗಾಗ್ಗೆ ಮುಖ್ಯಾಂಶದಲ್ಲಿರುತ್ತಾರೆ. ಅಂದಹಾಗೆ ಈ ಜೋಡಿ ಮುದ್ದಾದ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಈ ಮಧ್ಯೆ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜವೇ ಎಂಬುದನ್ನು ಮುಂದೆ ತಿಳಿಯೋಣ. ಇದನ್ನೂ ಓದಿ: ದೀಪಿಕಾ ಗರ್ಭಿಣಿಯಾದಾಗಿನಿಂದ ಒಂದಲ್ಲ ಒಂದು ವದಂತಿ ಹರಿದಾಡುತ್ತಲೇ ಇವೆ. ಇತ್ತೀಚೆಗೆಯಷ್ಟೇ ದೀಪಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಫೇಕ್‌ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ವೈರಲ್‌ ಆಗಿದ್ದು, ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿವೆ. ಇದನ್ನೂ ಓದಿ: ಈ ವದಂತಿಗಳಿಂದ ದೀಪಿಕಾ ಮತ್ತು ರಣವೀರ್ ಸಿಂಗ್ ನಿರಂತರವಾಗಿ ತೊಂದರೆಗೊಳಗಾಗಿದ್ದಾರೆ. ಪ್ರತಿದಿನ ಒಂದಲ್ಲ ಒಂದು ರೀತಿಯ ವದಂತಿಗಳು ಹರಿದಾಡುತ್ತಲೇ ಇವೆ. ಇದು ಈ ಸೆಲೆಬ್ರಿಟಿ ಜೋಡಿಗೆ ತಲೆನೋವಾಗಿ ಪರಿಣಮಿಸಿದೆ. ದಂಪತಿ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಪದೇ ಪದೇ ಮನವಿ ಮಾಡಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...