. : ಖ್ಯಾತ ಗಾಯಕಿ ಪಿ. ಸುಶೀಲಾ ಅಸ್ವಸ್ಥ..! ಆಸ್ಪತ್ರೆಗೆ ದಾಖಲು, ಆತಂಕದಲ್ಲಿ ಅಭಿಮಾನಿಗಳು . : ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸುಮಾರು 17 ಸಾವಿರಕ್ಕೂ ಹೆಚ್ಚು ಹಾಡುಗಳನ್ನ ಹಾಡಿ ದಾಖಲೆ ನಿರ್ಮಿಸಿರುವ ಜನಪ್ರಿಯ ಗಾಯಕಿ ಪಿ. ಸುಶೀಲಾ ಅಸ್ವಸ್ಥರಾಗಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. . :ಜನಪ್ರಿಯ ಗಾಯಕಿ ಪಿ. ಸುಶೀಲಾ (86) ಅಸ್ವಸ್ಥರಾಗಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಹಿರಿಯ ಗಾಯಕಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆಗಸ್ಟ್ 17 ರಂದು ಸುಶೀಲಾ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆಗಳ ನಂತರ ಯಾವುದೇ ತೊಂದರೆ ಇಲ್ಲ, ಇದು ಸಾಮಾನ್ಯ ಹೊಟ್ಟೆ ನೋವು ಎಂದು ವೈದರು ಹೇಳಿದ್ದಾರೆ. ಇದನ್ನೂ ಓದಿ: ಸುಶೀಲಾ ಅವರ ಆರೋಗ್ಯ ಮಾಹಿತಿಯನ್ನು ಕುಟುಂಬಸ್ಥರು ಬಹಿರಂಗಪಡಿಸಿದ್ದಾರೆ. ಶೀಘ್ರದಲ್ಲೇ ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದ್ದಾರೆ. ಸುಶೀಲಮ್ಮ ಶೀಘ್ರವೇ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.. ಸಧ್ಯ ಯಾವುದೇ ಆತಂಕ ಪಡುವ ಅಗತ್ಯವಿಲ್ಲ.. ಭಾರತೀಯ ಚಲನಚಿತ್ರ ಸಂಗೀತದ ಇತಿಹಾಸದಲ್ಲಿ ಪಿ. ಸುಶೀಲ ಎಂಬ ಹೆಸರಿಗೆ ವಿಶೇಷ ಸ್ಥಾನವಿದೆ. ಸುಮಾರು 60 ವರ್ಷಗಳ ಕಾಲ ತೆಲುಗು, ತಮಿಳು, ಮಲಯಾಳಂ, ಕನ್ನಡ, ಮರಾಠಿ, ಬೆಂಗಾಲಿ ಮತ್ತು ತುಳು ಭಾಷೆಗಳಲ್ಲಿ 17 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಇದನ್ನೂ ಓದಿ: ವಯಸ್ಸಾದ ಕಾರಣ ಸುಶೀಲಮ್ಮ ಅವರು ಹಲವಾರು ವರ್ಷಗಳಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಒಟ್ಟು 5 ರಾಷ್ಟ್ರೀಯ ಪ್ರಶಸ್ತಿಗಳು ಸೇರಿದಂತೆ ರಾಷ್ಟ್ರಪ್ರಶಸ್ತಿ ಪಡೆದ ಮೊದಲ ಗಾಯಕಿ ಎಂಬ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ, ಅತಿ ಹೆಚ್ಚು ಹಾಡುಗಳನ್ನು ಹಾಡಿ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಇತ್ತೀಚೆಗಷ್ಟೇ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ʼನನಗೆ ಈಗ ವಯಸ್ಸಾಗಿದೆ, ನನ್ನ ದೇಹದಲ್ಲಿ ತಾಳ್ಮೆ ಇಲ್ಲ, ತಾಳ್ಮೆಯಿದ್ದರೆ, ನಾನು ಈ ಪೀಳಿಗೆ ಗಾಯಕರೊಂದಿಗೆ ಸ್ಪರ್ಧಿಸಿ ಇನ್ನೂ ಹೆಚ್ಚು ಹಾಡುಗಳನ್ನು ಹಾಡುತ್ತಿದ್ದೆʼ ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದ್ದನ್ನ ಈಗ ನೆನೆಪಿಸಿಕೊಳ್ಳಬಹುದು.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...