ಸ್ವಾತಂತ್ರ್ಯ ದಿನದಂದು 'ಗೌರಿ' ತೆರೆಗೆ: ಇಂದ್ರಜಿತ್ ಲಂಕೇಶ್, ಸಾನ್ಯಾ ಅಯ್ಯರ್‌ ಚೊಚ್ಚಲ ಸಿನಿಮಾ ರಿಲೀಸ್‌ : ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಆಗಮಿಸಿದೆ. ಬೆಂಗಳೂರು:ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಮ್ಮ ಪುತ್ರ ಸಮರ್ಜಿತ್ ಲಂಕೇಶ್‌ ಅವರನ್ನು ಗೌರಿ ಚಿತ್ರದ ಮೂಲಕ ಸಿನಿರಂಗಕ್ಕೆ ಪರಿಚಯಿಸಿದ್ದಾರೆ. ಸಾನ್ಯಾ ಅಯ್ಯರ್ ಮತ್ತು ಸಮರ್ಜಿತ್ ಲಂಕೇಶ್‌ ಅಭಿನಯದ ಗೌರಿ ಆಗಸ್ಟ್‌ 15 ರಂದು ತೆರೆ ಕಂಡಿದೆ. ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಆಗಮಿಸಿದೆ. ಈಗಾಗಲೇ ಹಾಡು, ಪೋಸ್ಟರ್‌ ಮೂಲಕ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ವೀಕ್ಷಿಸಲು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ನೀನಾಸಂ ಅಶ್ವಥ್, ಮಾನಸೀ ಸುಧೀರ್, ಸಂಪತ್‍ ಮೈತ್ರೇಯಾ ಸೇರಿದಂತೆ ಬಹು ದೊಡ್ಡ ತಾರಾಗಣವಿರುವ ಗೌರಿ ಚಿತ್ರವನ್ನು ಅದ್ಧೂರಿ ಬಜೆಟ್ ನಲ್ಲಿ ನಿರ್ಮಿಸಲಾಗಿದೆ. ಇದನ್ನೂ ಓದಿ : ಗೌರಿ ಸಿನಿಮಾಗೆ ಇಂದ್ರಜಿತ್‌ ಲಂಕೇಶ್‌ ಆಕ್ಷನ್‌ ಕಟ್‌ ಹೇಳಿದ್ದು ಅವರ ಪುತ್ರ ಸಮರ್ಜಿತ್‌ ಲಂಕೇಶ್‌ ಹಾಗೂ ಸಾನ್ಯಾ ಅಯ್ಯರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೈಲರ್​ ಅನ್ನು ನಟ ಕಿಚ್ಚ ಸುದೀಪ್‌ ಬಿಡುಗಡೆ ಮಾಡಿದ್ದರು. ಟೀಸರ್ ಅನ್ನು ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಶ್ರೆಯಾಂಕಾ ಪಾಟೀಲ್ ರಿಲೀಸ್‌ ಮಾಡಿದ್ದರು. ಇತ್ತೀಚೆಗಷ್ಟೇ ಚಿತ್ರದ ಪ್ರೀ ರಿಲೀಸ್ ಈವೆಂಟ್​ ಕೂಡ ಅದ್ಧೂರಿಯಾಗಿ ನಡೆದಿತ್ತು. ಸಮಾರಂಭಕ್ಕೆ ಸಾಕ್ಷಿಯಾದ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದರು. ಎ.ಜೆ ಶೆಟ್ಟಿ ಮತ್ತು ಕೃಷ್ಣಕುಮಾರ್ ಛಾಯಾಗ್ರಹಣವಿದ್ದು, ಮಾಸ್ತಿ ಮಂಜು, ರಾಜಶೇಖರ್, ಮಧು ಸಂಭಾಷಣೆ ಬರೆದಿದ್ದಾರೆ. ರವಿವರ್ಮಾ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ : ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...