NTRಗೆ ಅಪಘಾತ.. ಕೈಗೆ ಗಾಯ..! ಏನಾಯ್ತು ಯಂಗ್‌ ಟೈಗರ್‌ಗೆ..? : ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಜೂನಿಯರ್ ರಸ್ತೆ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಅವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಸಧ್ಯ ನಟನ ಆರೋಗ್ಯ ಹೇಗಿದೆ..? ಸಂಪೂರ್ಣ ವಿವರ ಇಲ್ಲಿದೆ.. :ಯಂಗ್ ಟೈಗರ್ ಜೂನಿಯರ್ ಎನ್‌ಟಿಆರ್ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಈ ಅಪಘಾತದಲ್ಲಿ ಅವರ ಎಡಗೈ ಮಣಿಕಟ್ಟು ಮತ್ತು ಬೆರಳುಗಳಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ ಹೈದರಾಬಾದ್ ನಗರದ ಜುಬಿಲಿ ಹಿಲ್ಸ್‌ನಲ್ಲಿ ತಾರಕ್ ರಸ್ತೆ ಅಪಘಾತಕ್ಕೀಡಾಗಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಷಯದ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಅಲ್ಲದೆ, ರಸ್ತೆ ಅಪಘಾತದ ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಈ ಸುದ್ದಿ ತಿಳಿದ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.. ಇದನ್ನೂ ಓದಿ: ಸಧ್ಯ ತಾರಕ್ ದೇವರ ಭಾಗ-1 ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಇದು ಕೊನೆಯ ಶಾಟ್ ಎಂದು ಶೂಟಿಂಗ್ ಸ್ಥಳದಿಂದ ಫೋಟೋ ಹಂಚಿಕೊಂಡಿದ್ದಾರೆ. ದೇವರ ಸಿನಿಮಾ ಸೆಪ್ಟೆಂಬರ್ 27ಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಇತ್ತೀಚಿಗೆ ಬಿಡುಗಡೆಯಾದ ಸಾಂಗ್‌ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇನ್ನು ಎನ್‌ಟಿಆರ್‌ ತಂಡ ಅಪಘಾತದ ಬಗ್ಗೆ ಪ್ರತಿಕ್ರಿಯೆ ನೀಡಿದೆ. “ಕೆಲವು ದಿನಗಳ ಹಿಂದೆ ಜಿಮ್‌ನಲ್ಲಿ ವರ್ಕ್‌ಔಟ್ ಮಾಡುವಾಗ ಎನ್‌ಟಿಆರ್ ಅವರ ಎಡ ಕೈ ಉಳುಕಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಅವರ ಕೈಗೆ ಕಟ್ಟು ಹಾಕಿಸಲಾಗಿದೆ. ಗಾಯದ ಹೊರತಾಗಿಯೂ.. ಎನ್‌ಟಿಆರ್ ನಿನ್ನೆ ರಾತ್ರಿ ದೇವರ ಶೂಟಿಂಗ್ ಮುಗಿಸಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ.. ಶೀಘ್ರದಲ್ಲೇ ಅವರು ಚೇತರಿಸಿಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...