ಸೃಜನ್ ಲೋಕೇಶ್ ನಿರ್ದೇಶನದ "" ಚಿತ್ರದ ಚಿತ್ರೀಕರಣ ಮುಕ್ತಾಯ :ಮೊದಲ ಚಿತ್ರದಲ್ಲಿಯೇ ತಾಯಿ ಮತ್ತು ಮಗನಿಗೆ ಆಕ್ಷನ್ ಕಟ್ ಹೇಳಿದ ಮಾತಿನ ಮಲ್ಲ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ "" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣದೊಂದಿಗೆ "ಜಿ ಎಸ್ ಟಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು :ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ "" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣದೊಂದಿಗೆ "ಜಿ ಎಸ್ ಟಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಹಾಡುಗಳನ್ನು ಬರೆದಿದ್ದಾರೆ.ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಸಿಜಿ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. "" ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ.ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ.ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ.ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ : ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ : ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...