ಸ್ವಪಕ್ಷದವನಿಂದಲೇ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ! ಕೊಲೆಗೆ ಸಂಚು ರೂಪಿಸಿದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಯಾರು? : ಎಫ್‌’ಬಿಐ ಪ್ರಕಾರ, ಪೆನ್ಸಿಲ್ವೇನಿಯಾದ ಬಟ್ಲರ್‌’ನಲ್ಲಿ ನಡೆದ ರಿಪಬ್ಲಿಕನ್ ರ್ಯಾಲಿಯಲ್ಲಿ ಮಾಜಿ ಅಧ್ಯಕ್ಷರ ಹತ್ಯೆಗೆ ಯತ್ನಿಸಿದ್ದ 20 ವರ್ಷ ವಯಸ್ಸಿನ ಥಾಮಸ್ ಮ್ಯಾಥ್ಯೂ ಕ್ರೂಕ್ಸ್, ಭದ್ರತಾ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದ್ದಾನೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನಿಸಿದ ಶಂಕಿತನನ್ನು ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಲಾಗಿದೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಫ್‌’ಬಿಐ ಪ್ರಕಾರ, ಪೆನ್ಸಿಲ್ವೇನಿಯಾದ ಬಟ್ಲರ್‌’ನಲ್ಲಿ ನಡೆದ ರಿಪಬ್ಲಿಕನ್ ರ್ಯಾಲಿಯಲ್ಲಿ ಮಾಜಿ ಅಧ್ಯಕ್ಷರ ಹತ್ಯೆಗೆ ಯತ್ನಿಸಿದ್ದ 20 ವರ್ಷ ವಯಸ್ಸಿನ ಥಾಮಸ್ ಮ್ಯಾಥ್ಯೂ ಕ್ರೂಕ್ಸ್, ಭದ್ರತಾ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದ್ದಾನೆ. ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ ನಿವಾಸಿ. ಬಟ್ಲರ್ ರ್ಯಾಲಿಯಲ್ಲಿ ಯುಎಸ್ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಕ್ರೂಕ್ಸ್ ಅನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಏಜೆನ್ಸಿಯ ವಕ್ತಾರ ಆಂಥೋನಿ ಗುಗ್ಲಿಯೆಲ್ಮಿ ಹೇಳಿದ್ದಾರೆ. ಇನ್ನು ಈ ಗುಂಡಿನ ದಾಳಿಯಲ್ಲಿ ಓರ್ವ ಸಾರ್ವಕನಿಕ ಕೂಡ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಮೆರಿಕದ ಸೀಕ್ರೆಟ ಸರ್ವಿಸ್ ಸೇವೆ ತಿಳಿಸಿದೆ. ಇದನ್ನೂ ಓದಿ: ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ರೇಸ್‌’ನಲ್ಲಿ ಮುಂಚೂಣಿಯಲ್ಲಿರುವ ಡೊನಾಲ್ಡ್ ಟ್ರಂಪ್ ಶನಿವಾರ (ಸ್ಥಳೀಯ ಕಾಲಮಾನ) ಬಟ್ಲರ್‌ನಲ್ಲಿ ನಡೆದ ರ್ಯಾಲಿಯಲ್ಲಿ ತಮ್ಮ ಫಾಲೋವರ್ಸ್’ಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಗುಂಡಿನ ಸದ್ದು ಕೇಳಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...