ಇವಿಎಂ ಮತಯಂತ್ರವನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದ ಎಲೋನ್ ಮಾಸ್ಕ್..! ಎಕ್ಷ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥ ಎಲೋನ್ ಮಾಸ್ಕ್ ಇವಿಎಂ ಮತಯಂತ್ರಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದು ಹೇಳಿರುವುದು ಈಗ ದೇಶದ ರಾಜಕೀಯದಲ್ಲಿ ಭಾರಿ ಕೋಲಾಹಲವನ್ನು ಸೃಷ್ಟಿಸಿದೆ. ನವದೆಹಲಿ:ಎಕ್ಷ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥ ಎಲೋನ್ ಮಾಸ್ಕ್ ಇವಿಎಂ ಮತಯಂತ್ರಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದು ಹೇಳಿರುವುದು ಈಗ ದೇಶದ ರಾಜಕೀಯದಲ್ಲಿ ಭಾರಿ ಕೋಲಾಹಲವನ್ನು ಸೃಷ್ಟಿಸಿದೆ. ಹೌದು, ರಾಬರ್ಟ್ ಕೆನಡಿ ಎನ್ನುವವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಎಲೋನ್ ಮಾಸ್ಕ್ 'ವಿದ್ಯುನ್ಮಾನ ಮತಯಂತ್ರಗಳನ್ನು ತೆಗೆದುಹಾಕಬೇಕು. ಮಾನವರು ಅಥವಾ ನಿಂದ ಹ್ಯಾಕ್ ಆಗುವ ಅಪಾಯವು ಚಿಕ್ಕದಾಗಿದ್ದರೂ, ಅದರ ಸಾಧ್ಯತೆ ಅಧಿಕವಾಗಿದೆ; ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.ಈ ಕುರಿತಾಗಿ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆದಿದೆ. — (@) ಈ ಹಿಂದಿನ ಸರ್ಕಾರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮುಖ್ಯಸ್ಥರಾಗಿದ್ದ ಚಂದ್ರಶೇಖರ್ ಅವರು ಮಸ್ಕ್‌ಗೆ ನೀಡಿದ ಉತ್ತರದಲ್ಲಿ 'ಯಾರೂ ಸುರಕ್ಷಿತ ಡಿಜಿಟಲ್ ಹಾರ್ಡ್‌ವೇರ್ ಅನ್ನು ನಿರ್ಮಿಸಲು ಸಾಧ್ಯವಿಲ್ಲ' ಎಂದು ತೋರುತ್ತಿದೆ ಎಂದು ಸೂಚಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸುತ್ತಾ ಅವರು ಏನನ್ನು ಬೇಕಾದರೂ ಹ್ಯಾಕ್ ಮಾಡಬಹುದು ಮಸ್ಕ್ ಪ್ರತಿಕ್ರಿಯಿಸಿದ್ದಾರೆ.ಈಗ ಮಸ್ಕ್ ಅವರ ಪ್ರತಿಕ್ರಿಯೆ ಹೊರಬಿಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇವಿಎಂಗಳ ಬಗ್ಗೆ ಮಸ್ಕ್ ಅವರ ಆತಂಕವನ್ನು ಬೆಂಬಲಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...