ಇರಾನ್ ದೇಶದ ಅಧ್ಯಕ್ಷ ಇಬ್ರಾಹಿಂ ರೈಸಿ ಸ್ಮರಣಾರ್ಥ ಮೇ 21ರಂದು ಭಾರತದಾದ್ಯಂತ ಶೋಕಾಚರಣೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ಬೈಜಾನ್ ಪ್ರಾಂತ್ಯದ ಗಡಿ ಬೆಟ್ಟಗಳಲ್ಲಿ ಪತನಗೊಂಡಿದ್ದರಿಂದಾಗಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ವಿದೇಶಾಂಗ ಸಚಿವ ಅಮೀರ್ ಅಬ್ದುಲ್ಲಾಹಿಯಾನ್ ಮತ್ತು ಕೆಲವು ಹಿರಿಯ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನವದೆಹಲಿ:ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೃತಪಟ್ಟ ಇರಾನ್ ದೇಶದ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಗೌರವಾರ್ಥಪೂರಕವಾಗಿ ಭಾರತ ದೇಶದಾದ್ಯಂತ ಒಂದು ದಿನದ ಮಟ್ಟಿಗೆ ಶೋಕ ಆಚರಣೆ ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ ಈ ದಿನದಂದು ಭಾರತದಾದ್ಯಂತ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ, ಆ ದಿನದಿಂದ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. 21, 2024 () . (2/2) — , (@) ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ಬೈಜಾನ್ ಪ್ರಾಂತ್ಯದ ಗಡಿ ಬೆಟ್ಟಗಳಲ್ಲಿ ಪತನಗೊಂಡಿದ್ದರಿಂದಾಗಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ವಿದೇಶಾಂಗ ಸಚಿವ ಅಮೀರ್ ಅಬ್ದುಲ್ಲಾಹಿಯಾನ್ ಮತ್ತು ಕೆಲವು ಹಿರಿಯ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈಗ ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ ಭಾರತ ಸರ್ಕಾರವು ಮೇ 21 ರಂದು ದೇಶದಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...