: ಪಾಕಿಸ್ತಾನದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ₹289ಕ್ಕೆ ಏರಿಕೆ! : ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪ್ರಸ್ತುತ 1 ಲೀಟರ್ ಪೆಟ್ರೋಲ್ ಬೆಲೆ 279 ರೂ.ನಷ್ಟಿದೆ. ಮುಂದಿನ 15 ದಿನಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 289 ರೂ.ನಷ್ಟು ಏರಿಕೆಯಾಗಲಿದೆ ಎಂದು ವರದಿಯಾಗಿದೆ. ನವದೆಹಲಿ:ಕೆಟ್ಟ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ನಲುಗಿ ಹೋಗಿರುವ ಪಾಕಿಸ್ತಾನದಲ್ಲಿ ದಿನಬಳಕೆ ವಸ್ತುಗಳು ಸೇರಿದಂತೆ ಪ್ರತಿಯೊಂದು ದುಬಾರಿಯಾಗಿವೆ. ಇದೀಗ ಪಾಕ್‌ ಪ್ರಜೆಗಳಿಗೆ ಮತ್ತೊಂದು ಶಾಕ್‌ ನೀಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಹೌದು, ಪ್ರಧಾನಿನೇತೃತ್ವದ ಪಾಕ್‌ ಸರ್ಕಾರು ಪೆಟ್ರೋಲ್ ದರವನ್ನು ಮತ್ತಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆಯಂತೆ. ವರದಿಗಳ ಪ್ರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆ, ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು ಕನಿಷ್ಠ 10 ಪಾಕಿಸ್ತಾನಿ ರೂ.ನಷ್ಟು ಏರಿಕೆ ಮಾಡಲು ತೀರ್ಮಾನಿಸಿದೆಯಂತೆ. ಇದನ್ನೂ ಓದಿ: ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪ್ರಸ್ತುತ 1 ಲೀಟರ್ ಪೆಟ್ರೋಲ್ ಬೆಲೆ 279 ರೂ.ನಷ್ಟಿದೆ. ಮುಂದಿನ 15 ದಿನಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 289 ರೂ.ನಷ್ಟು ಏರಿಕೆಯಾಗಲಿದೆ ಎಂದು ವರದಿಯಾಗಿದೆ. ಇದಲ್ಲದೆ ಹೈಸ್ಪೀಡ್ಯನ್ನು ಪ್ರತಿ ಲೀಟರ್ ಗೆ 1.30 ರೂ.ನಷ್ಟು ಇಳಿಕೆ ಮಾಡಲಾಗಿದೆ. ಹೀಗಾಗಿ ಹೈಸ್ಪೀಡ್ ಡೀಸೆಲ್ ಬೆಲೆ 285.86 ರೂ.ನಿಂದ 284.26 ರೂ.ಗೆ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...