ಬಾಂಗ್ಲಾದೇಶ: ಢಾಕಾದ ರೆಸ್ಟೋರೆಂಟ್‌ನಲ್ಲಿ ಭಾರಿ ಅಗ್ನಿ ಅವಘಡ, 44 ಮಂದಿ ಸಾವು : ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 44 ಮಂದಿ ಪಟ್ಟಿದ್ದಾರೆ. :ಗುರುವಾರ ತಡರಾತ್ರಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ . 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ನಡೆದಿದೆ. ಢಾಕಾ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದನ್ನು ಓದಿ : ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಘಟನೆ ನಡೆದ ಪ್ರದೇಶದಲ್ಲಿ ಅನೇಕ ಹೋಟೆಲ್​ಗಳು, ಬಟ್ಟೆ ಅಂಗಡಿಗಳು ಮತ್ತು ಮೊಬೈಲ್ ಫೋನ್ ಮಾರಾಟ ಅಂಗಡಿಗಳಿವೆ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಬರುತ್ತಿದ್ದರು, ಕೆಲವರು ಕಟ್ಟಡಿಂದ ಇಳಿಯಲು ನೀರಿನ ಪೈಪ್ ಗಳನ್ನು ಬಳಸುತ್ತಿದ್ದರು. ಕೆಲವರು ಮಹಡಿಯಿಂದ ಕೆಳಗೆ ಜಿಗಿದು ಗಾಯಗೊಂಡಿದ್ದರು ಎಂದು ರೆಸ್ಟೋರೆಂಟ್ ಮ್ಯಾನೇಜರ್ ಹೇಳಿದ್ದಾರೆ. ಇದನ್ನು ಓದಿ : ಜುಲೈ 2021 ರಲ್ಲಿ, ಆಹಾರ ಸಂಸ್ಕರಣಾ ಕಾರ್ಖಾನೆಯಲ್ಲಿ ಬೆಂಕಿ ಆವರಿಸಿದಾಗ ಅನೇಕ ಮಕ್ಕಳು ಸೇರಿದಂತೆ ಕನಿಷ್ಠ 52 ಜನರು ಸಾವನ್ನಪ್ಪಿದ್ದರು ಎಂದು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...