ಇಸ್ರೇಲ್ - ಹಮಾಸ್ ಯುದ್ಧ : ಪ್ಯಾಲೆಸ್ಟೀನ್ ಜನರ ಸಾವಿನ ಸಂಖ್ಯೆ 30 ಸಾವಿರಕ್ಕೆ ಏರಿಕೆ - : ಗಾಜಾ ಅರೋಗ್ಯ ಸಚಿವಾಲಯವು ಗುರುವಾರ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ಟೀನ್ ಜನರ ಸಂಖ್ಯೆಯು ಸಾವಿರ ಗಡಿದಾಟಿದೆ ಎಂದು ತಿಳಿಸಿದೆ. :ಅಕ್ಟೋಬರ್ ನಲ್ಲಿ ಪ್ರಾರಂಭವಾದ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ಟೀನ್ ಜನರ ಸಂಖ್ಯೆಯು ಮೂವತ್ತು ಸಾವಿರ ಗಡಿ ದಾಟಿದೆ ಎಂದು ಗಾಜಾ ಆರೋಗ್ಯ ಸಚಿವಾಲಯವು ಗುರುವಾರ ತಿಳಿಸಿದೆ. ಇಸ್ರೇಲ್ ಸೇನೆಯು ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ತನ್ನ ಮೊದಲ ಗುರಿಯಾಗಿ ಕಾಜನಗರ ಮತ್ತು ಗಾಜಾ ಪಟ್ಟಿಯ ಉತ್ತರ ಭಾಗವನ್ನು ಆಯ್ಕೆ ಮಾಡಿಕೊಂಡು ಈ ಪ್ರದೇಶದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ಇದನ್ನು ಓದಿ : ಈ ಕಾರಣದಿಂದ ಗಾಜಾ ಪಟ್ಟಿಯ ಇತರ ಪ್ರದೇಶಗಳ ಜೊತೆಗಿನ ಸಂಪರ್ಕವನ್ನು ಕಳೆದುಕೊಂಡಿದೆ ಮತ್ತು ಗಾಜಾನಗರದ ಅಲ್ ಶಿಫಾ ಆಸ್ಪತ್ರೆಯಲ್ಲಿ ಅಪೌಷ್ಟಿಕತೆ, ನಿರ್ಜಲೀಕರಣ ಹಾಗೂ ಆಹಾರ ಕೊರತೆಯಿಂದಾಗಿ ಮಕ್ಕಳು ಮೃತಪಟ್ಟಿದ್ದಾರೆ ಗಾಜಾ ಪಟ್ಟಿಯಲ್ಲಿ ಬುಧವಾರ ರಾತ್ರಿ ನಡೆದ ದಾಳಿಗಳಲ್ಲಿ ಕನಿಷ್ಠ 70 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಗಾಜಾದಲ್ಲಿ ಆಗುತ್ತಿರುವ ಸಾವುಗಳನ್ನು ತಡೆಯಲು ಅಂತರಾಷ್ಟ್ರೀಯ ಸಂಘಟನೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವಾಲಯದ ಭಕ್ತರ ಅಶ್ರಫ್ ಅಲ್ ಕುದ್ರಾ ಮನವಿ ಮಾಡಿದ್ದಾರೆ ಇದನ್ನು ಓದಿ : ರಂಜಾನ್ ಮಾಸ ಶುರುವಾಗುವ ಮೊದಲೇ ಕದನ ವಿರಾಮ ಘೋಷಣೆ ಸಾಧ್ಯವಾಗಬಹುದು ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವೆ ಕನಿಷ್ಠ ಆರು ವಾರಗಳ ಕದನ ವಿರಾಮ ಜಾರಿಗೆ ತರಲು ಈಜಿಪ್ಟ್ , ಕತಾಲ್ ಮತ್ತು ಅಮೆರಿಕಾದ ಮಧ್ಯಸ್ಥಿಕೆದಾರರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...