ಭಾರತೀಯರು ಮತ್ತು ಭಾರತೀಯ ಅಮೇರಿಕನ್ ವಿದ್ಯಾರ್ಥಿಗಳ ಮೇಲೆ ದಾಳಿ ತಡೆಗೆ ಕ್ರಮ : ಅಮೇರಿಕ ಅಧ್ಯಕ್ಷ ಜೋ ಬೈಡನ್ ಹೇಳಿಕೆ - : ಭಾರತೀಯರು ಮತ್ತು ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳ ಮೇಲಿನ ದಾಳಿ ತಡೆಯಲು ಅಮೆರಿಕ ಆಡಳಿತ ಶ್ರಮಿಸುತ್ತಿದೆ ಎಂದು ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾತನಾಡಿದರು. - :ಭಾರತೀಯರು ಮತ್ತು ಭಾರತೀಯ ಅಮೆರಿಕ ವಿದ್ಯಾರ್ಥಿಗಳ ಮೇಲೆ ದೇಶದ ವಿವಿಧಡೆ ದಾಳಿಗಳು ನಡೆಯುತ್ತಲೇ ಇದ್ದು ಆ ಕುರಿತು ಅಮೆರಿಕಾದ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನಕಿ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹಿಂಸಾಚಾರಕ್ಕೆ ಯಾವುದೇ ರೀತಿಯ ಕ್ಷಮೆ ಇಲ್ಲ ಅದರಲ್ಲಿ ಯಾವುದೇ ರೀತಿಯ ಜನಾಂಗೀಯ, ಲಿಂಗ, ಧರ್ಮ ಅಥವಾ ಯಾವುದೇ ಅಂಶಗಳ ಮೇಲೆ ನಡೆಯುವ ಹಿಂಸಾಚಾರವನ್ನು ನಾವು ಸಹಿಸುವುದಿಲ್ಲ ಇದನ್ನ ಅಮೆರಿಕದಲ್ಲಿ ಸ್ವೀಕರಿಸಲಾಗುವುದು ಇಲ್ಲ ಎಂದು ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ ಇದನ್ನು ಓದಿ : ಈ ಕುರಿತಂತೆ ರಾಜ್ಯ ಮತ್ತು ಸರಿಯಾದ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದು ಈ ರೀತಿಯ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು. ಇದನ್ನು ಓದಿ : ಕೆಲ ವಾರಗಳಲ್ಲಿ ನಡೆದ ದಾಳಿಗಳಲ್ಲಿ ನಾಲ್ವರು ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳು ಮೃತಪಟ್ಟಿದ್ದು ಮತ್ತು ಅದರ ಜೊತೆಗೆ ಜನವರಿಯಲ್ಲಿ ಮಾದಕ ವ್ಯಸನಿ ನಡೆಸಿದ ದಾಳಿಯಲ್ಲಿ ಜಾರ್ಜ್ಜಾದ ಲಿತುನ್ಯಾದ ಡಿಪಾರ್ಟ್ಮೆಂಟ್ ಸ್ಟೋರ್ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿವೇಕ್ ಸೈನ್ಯ ಎಂಬ ವಿದ್ಯಾರ್ಥಿ ಅಮೃತ ಪಟ್ಟಿದ್ದ ಫೆಬ್ರವರಿಯಲ್ಲಿ ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿದ್ಯಾರ್ಥಿ ಸೈಯದ್ ಮುಜಾಯಿರ್ ಅಲಿ ಮೇಲೆ ಹಲ್ಲೆ ನಡೆದಿತ್ತು ಎಂದು ವರದಿಯಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...