: ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರ ದುರ್ಮರಣ..! : ಬುಧವಾರ ಮಧ್ಯಾಹ್ನ 3.30ಕ್ಕೆ ನ್ಯೂಹೇವನ್ ಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ. ನವದೆಹಲಿ:ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ವಿಕ್ಟೋರಿಯಾ ರಾಜ್ಯದ ಫಿಲಿಪ್ ದ್ವೀಪದಲ್ಲಿ ಬುಧವಾರ ಈ ದುರ್ಘಟನೆ ಸಂಭವಿಸಿದೆ. ಕಳೆದ 20 ವರ್ಷಗಲ್ಲೇ ಇದು ವಿಕ್ಟೋರಿಯಾ ಸಮುದ್ರದಲ್ಲಿ ನಡೆದ ಅತ್ಯಂತ ಭೀಕರ ದುರಂತವಾಗಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬುಧವಾರ ಮಧ್ಯಾಹ್ನ 3.30ಕ್ಕೆಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಕ್ಯಾನ್‌ಬೆರಾದಲ್ಲಿರುವ ಭಾರತೀಯ ಹೈಕಮಿಷನ್ ಗುರುವಾರ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ʼಆಸ್ಟ್ರೇಲಿಯಾದಲ್ಲಿ ಹೃದಯವಿದ್ರಾವಕ ದುರಂತ ನಡೆದಿದೆ. ಇದನ್ನೂ ಓದಿ: ದ ಫಿಲಿಪ್ ದ್ವೀಪದಲ್ಲಿ ಮುಳುಗಿ ನಾಲ್ವರು ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ. ಎಲ್ಲಾ ಅಗತ್ಯ ಸಹಾಯಕ್ಕಾಗಿ ಮೃತರ ಸಂಬಂಧಿಕರೊಂದಿಗೆ ನಾವು ಸಂಪರ್ಕದಲ್ಲಿದ್ದೇವೆಂದು ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ಸಚಿವ ಜೈಶಂಕರ್‌ ಅವರನ್ನು ಟ್ಯಾಗ್‌ ಮಾಡಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...