ದೇವಸ್ಥಾನದ ಗೋಡೆ ಮೇಲೆ ಭಾರತ ವಿರೋಧಿ ಘೋಷಣೆ, ಇದು ಖಲಿಸ್ತಾನಿಗಳ ಕೆಲಸವೇ!? - : ಖಲಿಸ್ತಾನ್ ಬೆಂಬಲಿಗರು ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್ ನಗರದ ಸ್ವಾಮಿನಾರಾಯಣ ದೇವಾಲಯದ ಗೋಡೆಯ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ. - :ಖಲಿಸ್ತಾನ್ ಬೆಂಬಲಿಗರು ಮತ್ತೊಮ್ಮೆ ಹಿಂದೂ ದೇವಾಲಯವನ್ನು ಗುರಿಯಾಗಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿ ಖಲಿಸ್ತಾನ್ ಬೆಂಬಲಿಗರು ಹಿಂದೂ ದೇವಾಲಯದ ಹೊರ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದಿದ್ದಾರೆ. ನೆವಾರ್ಕ್‌ ನಗರದಲ್ಲಿ ಸ್ವಾಮಿನಾರಾಯಣ ದೇವಸ್ಥಾನವಿದೆ. ಈ ದೇವಾಲಯದ ಗೋಡೆಗಳ ಮೇಲೆ ಕಪ್ಪು ಬಣ್ಣದಲ್ಲಿಘೋಷಣೆಗಳನ್ನು ಬರೆಯಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ನೇವಾರ್ಕ್ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಿಂದೂ-ಅಮೆರಿಕನ್ ಫೌಂಡೇಶನ್ ದೇವಾಲಯದ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಈ ಫೊಟೋಗಳ ಜೊತೆ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಖಾಲಿಸ್ತಾನಿ ಘೋಷಣೆಗಳನ್ನು ಬರೆದಿದ್ದಾರೆ ಮತ್ತು ಹಾನಿ ಮಾಡಿದ್ದಾರೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ವಿಷಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸ್ವಾಮಿನಾರಾಯಣ ದೇವಸ್ಥಾನದ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯುವುದನ್ನು ರಾಯಭಾರ ಕಚೇರಿ ತೀವ್ರವಾಗಿ ಖಂಡಿಸಿದೆ ಮತ್ತು ಈ ಘಟನೆಯಿಂದ ಭಾರತೀಯ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳಿದೆ. : , -. . . — (@) ಈ ವರ್ಷದ ಆಗಸ್ಟ್‌ನಲ್ಲಿ ಕೆನಡಾದ ಕೊಲಂಬಿಯಾ ನಗರದಲ್ಲಿ ಖಾಲಿಸ್ತಾನಿ ಬೆಂಬಲಿಗರು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದರು. ದೇವಸ್ಥಾನದ ಬಾಗಿಲಿಗೆ ಖಲಿಸ್ತಾನಿ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಈ ಸಂಪೂರ್ಣ ಘಟನೆ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವರ್ಷದ ಜನವರಿಯಲ್ಲಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...