ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್ ಪಾಕ್ ನಲ್ಲಿ ಹತ್ಯೆ :ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್ ನನ್ನು ಪಾಕಿಸ್ತಾನದ ಸಿಯಾಲ್ ಕೋಟ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. :ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್ ನನ್ನು ಪಾಕಿಸ್ತಾನದ ಸಿಯಾಲ್ ಕೋಟ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಈತನ ವಿರುದ್ಧ ಎನ್ ಐಎ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಲತೀಫ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಿವಾಸಿಯಾಗಿದ್ದು, ಜೈಷ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ. ಸಿಯಾಲ್‌ಕೋಟ್‌ನಲ್ಲಿ ಜೈಶ್‌ಗಾಗಿ ಕೆಲಸ ಮಾಡುತ್ತಿದ್ದ. ಭಯೋತ್ಪಾದಕರನ್ನು ಸಿದ್ಧಪಡಿಸುವುದು ಮತ್ತು ದಾಳಿಗಳನ್ನು ಯೋಜಿಸುವುದು ಈತನ ಜವಾಬ್ದಾರಿಯಾಗಿತ್ತು. 1994ರಲ್ಲಿ ಶಾಹಿದ್‌ ಬಂಧನ :ಶಾಹಿದ್‌ನನ್ನು 1994 ರಲ್ಲಿ ಬಂಧಿಸಲಾಗಿತ್ತು. ಸುಮಾರು 16 ವರ್ಷಗಳ ಶಿಕ್ಷೆಯನ್ನು ಅನುಭವಿಸಿದ ನಂತರ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಲಾಯಿತು.ವಾಯುನೆಲೆಯ ಮೇಲೆ ಜನವರಿ 2 ರಂದು ಭಯೋತ್ಪಾದಕರು ದಾಳಿ ನಡೆಸಿದ್ದರು. ಇದರ ಹಿಂದಿನ ಮಾಸ್ಟರ್ ಮೈಂಡ್ ಇದೇ ಶಾಹಿದ್‌. ಅಷ್ಟೇ ಅಲ್ಲ, ಇಂಡಿಯನ್ ಏರ್ ಲೈನ್ಸ್ ವಿಮಾನ ಅಪಹರಣದಲ್ಲಿಯೂ ಈತನ ಪಾತ್ರವಿತ್ತು ಎಂದು ಹೇಳಲಾಗುತ್ತದೆ. ಇದನ್ನೂ ಓದಿ : 2016ರಲ್ಲಿ ಪಠಾಣ್‌ಕೋಟ್‌ ವಾಯುನೆಲೆ ಮೇಲೆ ದಾಳಿ :2016ರಲ್ಲಿ ಪಠಾಣ್‌ಕೋಟ್‌ ವಾಯುನೆಲೆ ಮೇಲೆ ದಾಳಿ ನಡೆದಿದ್ದು, ಅದರ ಹೊಣೆಯನ್ನುವಹಿಸಿಕೊಂಡಿತ್ತು. ಆ ಉಗ್ರರ ದಾಳಿಯಲ್ಲಿ ಒಟ್ಟು ಏಳು ಯೋಧರು ಹುತಾತ್ಮರಾಗಿದ್ದರು. ಪಠಾಣ್‌ಕೋಟ್ ವಾಯುನೆಲೆಯು ಹೆಚ್ಚು ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ಪಾಕಿಸ್ತಾನದ ಗಡಿಗೆ ಸಮೀಪದಲ್ಲಿದ್ದು, ಇಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹವೂ ಇದೆ. ಯುದ್ಧದ ಸಮಯದಲ್ಲಿ ಅದರ ಪಾತ್ರ ಮಹತ್ವದ್ದಾಗಿರುತ್ತದೆ. ಪಾಕಿಸ್ತಾನದೊಂದಿಗೆ 1965 ಮತ್ತು 1971 ರ ಯುದ್ಧಗಳ ಬಗ್ಗೆ ಮಾತನಾಡುವುದಾದರೆ, ಪಠಾಣ್‌ಕೋಟ್‌ ವಾಯುನೆಲೆ ಪಾತ್ರ ಮುಖ್ಯವಾಗಿತ್ತು. ಇದನ್ನೂ ಓದಿ : ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...