: 6ಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ನಾಶ, ಅವಶೇಷಗಳಡಿ ನೂರಾರು ಜನರು! : ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ 40 ಕಿಮೀ ದೂರದಲ್ಲಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಅಫ್ಘಾನಿಸ್ತಾನದಲ್ಲಿ 6.3, 5.9 ಮತ್ತು 5.5 ತೀವ್ರತೆಯ 3 ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ನವದೆಹಲಿ:ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿರುವ 6.3 ತೀವ್ರತೆಯ ಭೂಕಂಪಕ್ಕೆ 2,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ಶನಿವಾರ ಪ್ರಬಲ ಭೂಕಂಪದ ಪರಿಣಾಮ ಪಶ್ಚಿಮ ಅಫ್ಘಾನಿಸ್ತಾನ ತತ್ತರಿಸಿ ಹೋಗಿತ್ತು. ಇದು ಕಳೆದ 2 ದಶಕಗಳಲ್ಲಿಯೇ ದೇಶಕ್ಕೆ ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ. ದಲ್ಲಿ ಸಂಭವಿಸಿದ ಭೂಕಂಪದಿಂದ 320 ಜನರು ಸಾವನ್ನಪ್ಪಿದ್ದಾರೆಂದು ವಿಶ್ವಸಂಸ್ಥೆಯು ಆರಂಭದಲ್ಲಿ ಪ್ರಾಥಮಿಕ ಅಂಕಿಅಂಶಗಳ ಮೂಲಕ ತಿಳಿಸಿತ್ತು. ಆದರೆ ಭಾನುವಾರ ಈ ಮಾರಣಾಂತಿಕ ಭೂಕಂಪವು 1,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೆರಾತ್ ಪ್ರಾಂತ್ಯದ ಜೆಂಡಾಜಾನ್ ಜಿಲ್ಲೆಯ ಸುಮಾರು 6 ಗ್ರಾಮಗಳು ಭೂಕಂಪದ ಹೊಡೆತಕ್ಕೆ ನಾಶವಾಗಿವೆ. ನೂರಾರು ಜನರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ವಿಪತ್ತು ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಅಬ್ದುಲ್ಲಾ ಜಾನ್ ತಿಳಿಸಿದ್ದಾರೆ. ಭೂಕಂಪದ ಹೊಡೆತಕ್ಕೆ ಸುಮಾರು 465ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, 135ಕ್ಕೂ ಹೆಚ್ಚು ಮನೆಗಳಿಗೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ನೂರಾರು ಜನರು ಕುಸಿದ ಕಟ್ಟಡಗಳ ಅಡಿಯಲ್ಲಿ ಸಿಲುಕಿದ್ದು, ಅವರಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ದುರಂತದಲ್ಲಿ ಸಾವನಿ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ 40 ಕಿಮೀ ದೂರದಲ್ಲಿದೆ ಎಂದುದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಅಫ್ಘಾನಿಸ್ತಾನದಲ್ಲಿ 6.3, 5.9 ಮತ್ತು 5.5 ತೀವ್ರತೆಯ 3 ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ನಗರದಲ್ಲಿ ಮಧ್ಯಾಹ್ನದ ವೇಳೆ ಕನಿಷ್ಠ 5 ಪ್ರಬಲ ಕಂಪನಗಳು ಸಂಭವಿಸಿವೆ ಎಂದು ಹೆರಾತ್ ನಿವಾಸಿ ಅಬ್ದುಲ್ ಶಕೋರ್ ಸಮಾದಿ ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...