: 45ಕ್ಕೂ ಹೆಚ್ಚು ಮಹಿಳೆಯರ ರೇಪ್ ಮಾಡಿದ್ದ ಕಾಮುಕ ಪ್ರಿನ್ಸಿಪಾಲ್ ಬಂಧನ! ಇರ್ಫಾನ್ ಮತ್ತು ಶಾಲೆಯ ಶಿಕ್ಷಕಿಯ ವಿಡಿಯೋ ವೈರಲ್ ಆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಖಾಸಗಿ ಶಾಲೆಗೆ ಆಗಮಿಸಿದ ಪೊಲೀಸರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಬಳಿಕ ಶಾಲೆಯನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ. ನವದೆಹಲಿ:45ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಕಾಮುಕ ಪ್ರನ್ಸಿಪಾಲ್‍ನನ್ನು ಬಂಧಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಮಹಿಳೆಯರನ್ನು ರೇಪ್ ಮಾಡಿದ್ದಲ್ಲದೆ ವಿಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡಿದ ಆರೋಪದ ಮೇರೆಗೆ ಕರಾಚಿಯ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಿನ್ಸಿಪಾಲ್‍ರನ್ನು ಇರ್ಫಾನ್ ಗಫೂರ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 25ಕ್ಕೂ ಹೆಚ್ಚು ವಿಡಿಯೋ ತುಣುಕುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು ಆತನ ಸಿಸಿಟಿಯ ಡಿವಿಆರ್ ಅನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಇರ್ಫಾನ್ ಮತ್ತು ಶಾಲೆಯ ಶಿಕ್ಷಕಿಯ ವಿಡಿಯೋ ವೈರಲ್ ಆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಖಾಸಗಿ ಶಾಲೆಗೆ ಆಗಮಿಸಿದ ಪೊಲೀಸರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಬಳಿಕ ಶಾಲೆಯನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ. ಲೈಂಗಿಕ ಕಿರುಕುಳ, ಬೆದರಿಕೆ ಮತ್ತು ಬ್ಲ್ಯಾಕ್‍ಮೇಲೆ ನಡೆಸಿದ ಆಧಾರದ ಮೇಲೆ ಆರೋಪಿ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕರಾಚಿ ಪೊಲೀಸರು ಉನ್ನತಮಟ್ಟದ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...