: ಭೀಕರ ರಸ್ತೆ ಅಪಘಾತಕ್ಕೆ 48 ಜನರು ಬಲಿ..! : ಇತ್ತೀಚಿನ ವರ್ಷಗಳಲ್ಲಿ ಕೀನ್ಯಾದ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಕಳೆದ ವರ್ಷ ಮಧ್ಯ ಕೀನ್ಯಾದಲ್ಲಿ ಬಸ್ ನದಿಯ ಕಣಿವೆಗೆ ಉರುಳಿ 34 ಮಂದಿ ಸಾವನ್ನಪ್ಪಿದ್ದರು. ನೈರೋಬಿ:ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 48 ಜನರು ಸಾವನ್ನಪ್ಪಿದ್ದಾರೆ ಎಂದು ಸುದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 48 , , — (@) ಇದನ್ನೂ ಓದಿ: ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200KM ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಈ ರಸ್ತೆ ದುರಂತ ಸಂಭವಿಸಿದೆ. ಸ್ಥಳದಲ್ಲೇ 48 ಮಂದಿ ಮೃತಪಟ್ಟಿದ್ದು, ಸಾವನಿ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಘಟನೆಯಲ್ಲಿ ಎಷ್ಟು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿಲ್ಲವೆಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ಟಾಮ್ ಒಡೆರಾ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಟ್ರಕ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದನ್ನೂ ಓದಿ: , . . … — , (@) ಭಾರೀ ಮಳೆಯ ನಡುವೆಯೂ ರಾತ್ರಿ ಪೂರ್ತಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಅಪಘಾತದಿಂದ ನಜ್ಜುಗುಜ್ಜಾದ ವಾಹನಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ. ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಅವರು ಟ್ವೀಟ್‌ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ವೇಗವಾಗಿ ಬಂದ ಟ್ರಕ್ 6ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದು ಪಾದಚಾರಿಗಳ ಮೇಲೆ ಹರಿದಿದೆ ಎಂದು ಕೀನ್ಯಾ ರೆಡ್‌ಕ್ರಾಸ್ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ಕೀನ್ಯಾದ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಕಳೆದ ವರ್ಷ ಮಧ್ಯದಲ್ಲಿ ಬಸ್ ನದಿಯ ಕಣಿವೆಗೆ ಉರುಳಿ 34 ಮಂದಿ ಸಾವನ್ನಪ್ಪಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...