‘ನಾನು ಮೋದಿಯ ದೊಡ್ಡ ಅಭಿಮಾನಿ’: ಪ್ರಧಾನಿ ಭೇಟಿ ಬಳಿಕ ಎಲಾನ್ ಮಸ್ಕ್ ಹೇಳಿಕೆ : ಪ್ರಧಾನಿ ಮೋದಿ ಭೇಟಿಯಾದ ಬಳಿಕ ಮಾತನಾಡಿದ ಎಲಾನ್ ಮಸ್ಕ್, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಬೆಂಬಲಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಅಂತಾ ಇದೇ ವೇಳೆ ಅವರು ಹೇಳಿದ್ದಾರೆ. ನ್ಯೂಯಾರ್ಕ್:ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಮಂಗಳವಾರ ನ್ಯೂಯಾರ್ಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಪ್ರಧಾನಿ ಮೋದಿಯವರು 3 ದಿನಗಳ ಪ್ರವಾಸದ ನಿಮಿತ್ತ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಹಲವಾರು ದಿಗ್ಗಜ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಭೇಟಿ ಬಳಿಕ ಎಲಾನ್ ಮಸ್ಕ್ ಹರ್ಷ ವ್ಯಕ್ತಪಡಿಸಿದ್ದಾರೆ. ನಾನೂ ಸಹ ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಇದನ್ನೂಓದಿ: ಪ್ರಧಾನಿ ಮೋದಿ ಭೇಟಿ ಬಳಿಕ ಮಸ್ಕ್ ಅವರ ಪ್ರಮುಖ ಹೇಳಿಕೆಗಳು ಇದನ್ನೂಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...