ಒಂದು ತಿಂಗಳು ಈರುಳ್ಳಿ ತಿನ್ನದಿದ್ದರೆ ಏನಾಗುತ್ತದೆ? ದೇಹದಲ್ಲಿ ಆಗುವ ಬದಲಾವಣೆಗಳೇನು ಗೊತ್ತಾ? : ಪ್ರಪಂಚದಾದ್ಯಂತ ಅನೇಕ ಖಾದ್ಯಗಳಲ್ಲಿ ಈರುಳ್ಳಿಯನ್ನು ಬಳಸುತ್ತಾರೆ. ವಿವಿಧ ಪೌಷ್ಠಿಕಾಂಶದ ಮೌಲ್ಯಗಳೊಂದಿಗೆ ಈರುಳ್ಳಿ ರುಚಿ ಜೊತೆಗೆ ಆರೋಗ್ಯಕ್ಕೂ ಉತ್ತಮವಾಗಿದೆ. :ಪ್ರಪಂಚದಾದ್ಯಂತ ಅನೇಕ ಖಾದ್ಯಗಳಲ್ಲಿ ಈರುಳ್ಳಿಯನ್ನು ಬಳಸುತ್ತಾರೆ. ವಿವಿಧ ಪೌಷ್ಠಿಕಾಂಶದ ಮೌಲ್ಯಗಳೊಂದಿಗೆ ಈರುಳ್ಳಿ ರುಚಿ ಜೊತೆಗೆ ಆರೋಗ್ಯಕ್ಕೂ ಉತ್ತಮವಾಗಿದೆ. ಆದರೆ ಒಂದು ತಿಂಗಳು ಈರುಳ್ಳಿ ತಿನ್ನುವುದನ್ನು ಬಿಟ್ಟರೆ ಏನಾಗುತ್ತದೆ ಗೊತ್ತಾ? ಈರುಳ್ಳಿ ತಿನ್ನದಿದ್ದರೆ ದೇಹದಲ್ಲಿ ಆಗುವ ಬದಲಾವಣೆಗಳನ್ನು ತಿಳಿಯೋಣ.. ಒಂದು ತಿಂಗಳ ಕಾಲ ಈರುಳ್ಳಿಯನ್ನು ಸಂಪೂರ್ಣವಾಗಿ ತ್ಯಜಿಸುವುದರಿಂದ ಮಲಬದ್ಧತೆಯಿಂದ ಹಿಡಿದು ದೃಷ್ಟಿಯವರೆಗೂ ಹಲವು ಸಮಸ್ಯೆಗಳು ಬರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಈರುಳ್ಳಿಯಲ್ಲಿರುವ ವಿಟಮಿನ್ ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್ ಗಳು ದೇಹವನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇದನ್ನೂ ಓದಿ : ವಿಶೇಷವಾಗಿ ವಿಟಮಿನ್-ಸಿ, ವಿಟಮಿನ್-ಬಿ6 ಮತ್ತು ಇವುಗಳಲ್ಲಿರುವ ಫೋಲೇಟ್‌ಗಳು ಪ್ರತಿರಕ್ಷಣಾ ವ್ಯವಸ್ಥೆ, ಕೋಶಗಳ ಬೆಳವಣಿಗೆ ಮತ್ತು ಆರೋಗ್ಯಕರ ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇವುಗಳನ್ನು ಸೇವಿಸುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಒಂದು ತಿಂಗಳ ಕಾಲ ಈರುಳ್ಳಿ ತಿನ್ನುವುದನ್ನು ನಿಲ್ಲಿಸಿದರೆ ದೇಹದಲ್ಲಿ ಯಾವುದೇ ದೊಡ್ಡ ಬದಲಾವಣೆಗಳು ಆಗದೇ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗಲಿವೆ ಎನ್ನಲಾಗಿದೆ. ಈರುಳ್ಳಿಯನ್ನು ಪ್ರತಿದಿನ ಯಾವುದಾದರೊಂದು ರೂಪದಲ್ಲಿ ಸೇವಿಸದಿದ್ದರೆ ಮಲಬದ್ಧತೆಯ ಜೊತೆಗೆ ಜೀರ್ಣಕ್ರಿಯೆಯ ಸಮಸ್ಯೆಯೂ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಇದನ್ನೂ ಓದಿ : ಸೂಚನೆ:ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...