ಒಂದೇ ವಾರದಲ್ಲಿ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡುತ್ತದೆ ಈ ಆಹಾರ ! ಹಾರ್ಟ್ ಅಟ್ಯಾಕ್ ಅಪಾಯ ಕೂಡಾ ತಪ್ಪುವುದು ! :ಕೆಲವು ಆಹಾರಗಳು ನಮ್ಮ ನಾಡಿಗಳಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಅನೇಕ ಆಹಾರಗಳು ಕರಗುವ ಫೈಬರ್ ಅನ್ನು ಹೊಂದಿರುತ್ತವೆ.ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. :ನಾವು ಏನು ಆಹಾರ ತಿನ್ನುತ್ತೇವೆ ಎನ್ನುವುದೇ ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುವುದು.ನಮ್ಮ ಆರೋಗ್ಯದಲ್ಲಿ ಸುಧಾರಣೆ ಕಾಣಬೇಕಾದರೆ ಆಹಾರ ಪದ್ದತಿಯಲ್ಲಿ ಬದಲಾವಣೆ ಮಾಡಿಕೊಳ್ಳಲೇಬೇಕು.ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಸಂಖ್ಯೆಯ ಜನರು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಇದು ಗಂಭೀರ ಸಮಸ್ಯೆಯಾಗಿದ್ದು,ಹೃದ್ರೋಗಕ್ಕೆ ಕಾರಣವಾಗಬಹುದು.ಆದರೆ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು,ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಅಗತ್ಯ. ಕೆಲವು ಆಹಾರಗಳು ನಮ್ಮ ನಾಡಿಗಳಲ್ಲಿ ಸೇರಿಕೊಂಡಿರುವಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಅನೇಕ ಆಹಾರಗಳು ಕರಗುವ ಫೈಬರ್ ಅನ್ನು ಹೊಂದಿರುತ್ತವೆ.ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಇದನ್ನೂ ಓದಿ : ಕೊಲೆಸ್ಟ್ರಾಲ್ ಕರಗಿಸಲು ಈ ಆಹಾರ ಸೇವಿಸಿ :ಓಟ್ಸ್ :ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಓಟ್ಸ್ ಅತ್ಯಂತ ಪರಿಣಾಮಕಾರಿ.ಬೆಳಗಿನ ಉಪಾಹಾರಕ್ಕಾಗಿ ಓಟ್ಸ್ ಸೇವಿಸುವ ಮೂಲಕ 1 ರಿಂದ 2 ಗ್ರಾಂ ಕರಗುವ ಫೈಬರ್ ದೇಹ ಸೇರುತ್ತದೆ. ಕರಗುವ ಫೈಬರ್ ದೇಹದಿಂದ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಳಕು ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಬೀನ್ಸ್ :ಬೀನ್ಸ್, ಬದನೆಕಾಯಿ ಮತ್ತು ಬೆಂಡೆಕಾಯಿ ಕೊಲೆಸ್ಟ್ರಾಲ್ ರೋಗಿಗಳಿಗೆ ರಾಮಬಾಣ ಎದ್ನು ಹೇಳಲಾಗುತ್ತದೆ.ಈ ತರಕಾರಿಗಳು ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕರಗಿಸಿ ದೇಹದಿಂದ ಹೊರ ಹಾಕುತ್ತದೆ. ಇದನ್ನೂ ಓದಿ : ಬಾದಾಮಿ, ವಾಲ್‌ನಟ್ಸ್,ಮತ್ತು ಇತರ ಬೀಜಗಳನ್ನು ಸೇವಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ. ಪ್ರತಿದಿನ ಈ ಪದಾರ್ಥಗಳನ್ನು ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.ಕೆನೋಲ,ಸೂರ್ಯಕಾಂತಿ, ಕುಸುಬೆ ಮುಂತಾದ ದ್ರವ ಸಸ್ಯಜನ್ಯ ಎಣ್ಣೆಗಳನ್ನು ಅಡುಗೆಗೆ ಬಳಸುವುದರಿಂದ ಅಥವಾ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೇಬು, ದ್ರಾಕ್ಷಿ, ಸ್ಟ್ರಾಬೆರಿಗಳಂತಹ ಸಿಟ್ರಸ್ ಹಣ್ಣುಗಳಲ್ಲಿ ಪೆಕ್ಟಿನ್‌ನಲ್ಲಿ ಸಮೃದ್ಧವಾಗಿರುತ್ತವೆ.ಇದು ಕರಗುವ ಫೈಬರ್‌ನ ಒಂದು ವಿಧವಾಗಿದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿಯಾಗಿದೆ. ಸೋಯಾಬೀನ್ ಮತ್ತು ಅದರಿಂದ ತಯಾರಿಸಿದ ಆಹಾರಗಳಾದ ತೋಫು ಮತ್ತು ಸೋಯಾ ಹಾಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರಬಲ ಮಾರ್ಗ. ಪ್ರತಿದಿನ 25 ಗ್ರಾಂ ಸೋಯಾ ಪ್ರೋಟೀನ್ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು 5% ರಿಂದ 6% ರಷ್ಟು ಕಡಿಮೆ ಮಾಡಬಹುದು ಎನ್ನುವುದು ಅನೇಕ ಅಧ್ಯಯನಗಳಲ್ಲಿ ಸಾಬೀತಾಗಿದೆ. ಇದನ್ನೂ ಓದಿ : ವಾರದಲ್ಲಿ ಎರಡು ಅಥವಾ ಮೂರು ಬಾರಿ ಮೀನು ತಿನ್ನುವುದರಿಂದ ಕಡಿಮೆಯಾಗುತ್ತದೆ.ಮೀನಿನಲ್ಲಿ ಒಮೆಗಾ -3 ಕೊಬ್ಬಿನಂಶವಿರುತ್ತದೆ. ಇದು ರಕ್ತದಲ್ಲಿನ ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಅದನ್ನು ಅನುಮೋದಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...