ನಿತ್ಯ ಈ ಹಣ್ಣನ್ನು ಸೇವಿಸುತ್ತಾ ಬನ್ನಿ, ರಕ್ತ ನಾಳಗಳಲ್ಲಿ ಅಂಟಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು : ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಮುಖ್ಯವಾಗಿದೆ.ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸಿಕೊಳ್ಳಬಹುದು. :ಇತ್ತೀಚಿನ ದಿನಗಳಲ್ಲಿ,ತಪ್ಪು ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯಿಂದ,ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಸಾಮಾನ್ಯವಾಗುತ್ತಿದೆ.ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧ. ಮೊದಲನೆಯದು ಒಳ್ಳೆಯ ಕೊಲೆಸ್ಟ್ರಾಲ್ (ಎಚ್‌ಡಿಎಲ್) ಮತ್ತು ಎರಡನೆಯದು ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್).ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ, ಅದು ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ. ಹೀಗಾದಾಗ ಹಾರ್ಟ್ ಬ್ಲೋಕೆಜ್ ಉಂಟಾಗುತ್ತದೆ. ಇದು ಹೃದಯಾಘಾತ,ಪಾರ್ಶ್ವವಾಯು ಮತ್ತು ಇತರ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಮುಖ್ಯವಾಗಿದೆ.ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸಿಕೊಳ್ಳಬಹುದು. ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸೇವಿಸಿ ಈ ಹಣ್ಣುಗಳನ್ನು :ಸೇಬು ಹಣ್ಣು :ಪ್ರತಿನಿತ್ಯ ಸೇಬನ್ನು ತಿನ್ನುವುದರಿಂದ ಅನೇಕ ರೋಗಗಳನ್ನು ದೂರವಿಡಬಹುದು.ಇದು ಪೆಕ್ಟಿನ್ ಎಂಬ ಕರಗುವ ಫೈಬರ್ ಅನ್ನು ಹೊಂದಿರುತ್ತದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆಸುಧಾರಿಸುತ್ತದೆ. ಸಂಶೋಧನೆಯ ಪ್ರಕಾರ,ಪ್ರತಿದಿನ ಎರಡು ಸೇಬು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು 50% ರಷ್ಟು ಕಡಿಮೆ ಮಾಡಬಹುದು. ಇದನ್ನೂ ಓದಿ : ಕಿತ್ತಳೆ :ಸಿಟ್ರಸ್ ಹಣ್ಣುಗಳ ಸೇವನೆಯು ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ.ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ಈ ಹಣ್ಣುಗಳಲ್ಲಿ ಹೇರಳವಾಗಿ ಇರುತ್ತವೆ.ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಮಾತ್ರವಲ್ಲ ಈ ಹಣ್ಣುಗಳು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಕೂಡಾ ಸಹಾಯ ಮಾಡುತ್ತದೆ. ಬಾಳೆಹಣ್ಣು :ಸಮೃದ್ಧವಾಗಿರುವ ಹಣ್ಣು ಬಾಳೆಹಣ್ಣು.ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಇದರ ನಿಯಮಿತ ಸೇವನೆಯು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.ಇದಲ್ಲದೆ,ಬಾಳೆಹಣ್ಣು ನಮ್ಮ ಜೀರ್ಣಾಂಗ ವ್ಯವಸ್ಥೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ದ್ರಾಕ್ಷಿ :ದ್ರಾಕ್ಷಿ ತಿನ್ನಲು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುತ್ತದೆ.ಇದು ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ.ಇದರ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ : ಅನಾನಾಸ್ :ಅನಾನಸ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಹಣ್ಣು. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ.ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.ಇದರ ನಿಯಮಿತ ಸೇವನೆಯು ಅಧಿಕ ಕೊಲೆಸ್ಟ್ರಾಲ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. (: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಅದನ್ನು ಖಚಿತಪಡಿಸುವುದಿಲ್ಲ.) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...