: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ತಿಂದರೆ.. ಗ್ಯಾಸ್ ಸಮಸ್ಯೆ ಇರುವುದಿಲ್ಲ.. ! : ಅನೇಕರಿಗೆ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಇರುತ್ತದೆ. ಹೊಟ್ಟೆಯಲ್ಲಿ ಗ್ಯಾಸ್ ಉಂಟಾದಾಗ ವ್ಯಕ್ತಿಯು ಅನೇಕ ರೀತಿಯಲ್ಲಿ ಕಿರಿಕಿರಿಗೊಳ್ಳುತ್ತಾನೆ. ಪ್ರತಿದಿನ ಬೆಳಗ್ಗೆ ಇದನ್ನು ಜಗಿಯುವುದನ್ನು ರೂಢಿ ಮಾಡಿಕೊಂಡರೆ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಮಾಡಬಹುದು.. : ಅನೇಕರಿಗೆ ಸಾಮಾನ್ಯವಾಗಿ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಇರುತ್ತದೆ. ಇದಕ್ಕೆ ಹಲವಾರು ಕಾರಣಗಳಿರಬಹುದು.. ಆದರೆ ಕೆಲವೊಮ್ಮೆ ಜೀರ್ಣಾಂಗ ವ್ಯವಸ್ಥೆಯಲ್ಲಿನ ಸಮಸ್ಯೆಯಿಂದಲೂ ಈ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ, ಹೊಟ್ಟೆಯಲ್ಲಿ ಗ್ಯಾಸ್ ಉಂಟಾದಾಗ ವ್ಯಕ್ತಿಯು ಹಲವು ವಿಧಗಳಲ್ಲಿ ಕಿರಿಕಿರಿ ಅನುಭವಿಸುತ್ತಾನೆ.. ಹಸಿ ಬೆಳ್ಳುಳ್ಳಿ ಸೇವಿಸಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುತ್ತದೆ. ಹೌದು ಪ್ರತಿದಿನ ಬೆಳಗ್ಗೆ ಹಸಿ ಬೆಳ್ಳುಳ್ಳಿಯನ್ನು ಜಗಿಯುವುದನ್ನು ಅಭ್ಯಾಸ ಮಾಡಿಕೊಂಡರೇ ಇದರಿಂದ ನಿಮಗೆ ಹಲವಾರು ಪ್ರಯೋಜನಗಳನ್ನು ಸಿಗುತ್ತವೆ.. ಹಾಗಾದರೆ ಹಸಿ ಬೆಳ್ಳುಳ್ಳಿಯನ್ನು ಜಗಿಯುವುದರಿಂದ ಆಗುವ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ. ಇದನ್ನೂ ಒದಿ- ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ರೋಗ ನಿರೋಧಕ ಗುಣಲಕ್ಷಣಗಳು ಇವೆ.. ಇವು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡಿ.. ಹೊಟ್ಟೆಯ ಗ್ಯಾಸ್ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸುತ್ತವೆ.. ಇದನ್ನೂ ಒದಿ- ಹಸಿ ಬೆಳ್ಳುಳ್ಳಿ ಉತ್ತಮ ಜೀರ್ಣಾಂಗ ವ್ಯವಸ್ಥೆಗೆ ಹಲವು ರೀತಿಯಲ್ಲಿ ಉಪಯುಕ್ತವಾಗಿದೆ. ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಗ್ಯಾಸ್, ಅಬ್ಬಳಿಕೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿದ್ದು ಹೊಟ್ಟೆಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ. ಬೆಳ್ಳುಳ್ಳಿ ದೇಹದಲ್ಲಿರುವ ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ದೇಹದಲ್ಲಿನ ಇತರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...