: ಈ ಜಿಲ್ಲೆಗಳ ಯಜಮಾನಿಯರ ಖಾತೆಗೆ ಒಟ್ಟಿಗೆ 2 ತಿಂಗಳ ₹4,000 ಜಮಾ! : ಜೂನ್ ತಿಂಗಳಿನ 11ನೇ ಕಂತು ಹಾಗೂ ಜುಲೈ ತಿಂಗಳ 12ನೇ ಕಂತಿನ ಹಣ ಇನ್ನು ಸಹ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಹೇಳಲಾಗಿದೆ. :ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಜಾರಿಗೆ ತಂದ ಯೋಜನೆಯೇ ʼಗೃಹಲಕ್ಷ್ಮಿʼ ಯೋಜನೆ. ಈ ಯೋಜನೆಯ ಮೂಲಕ ಮನೆ ನಡೆಸಿಕೊಂಡು ಹೋಗುತ್ತಿರುವ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ₹2000ಗಳನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿಯನ್ನು ಜಾರಿಗೆ ತರಲಾಗಿತ್ತು. ಈಯೋಜನೆಯಡಿ ಸುಮಾರು 1.18 ಕೋಟಿ ಮಹಿಳೆಯರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕಳೆದ 10 ತಿಂಗಳುಗಳಿಂದ ಈ ಯೋಜನೆಯ ಹಣ ಬಹುತೇಕ ಮಹಿಳೆಯರನ್ನು ತಲುಪಿದೆ. ಇದನ್ನೂ ಓದಿ: ಆದರೆ ಜೂನ್ ತಿಂಗಳಿನ 11ನೇ ಕಂತು ಹಾಗೂ ಜುಲೈ ತಿಂಗಳ 12ನೇ ಕಂತಿನ ಹಣ ಇನ್ನು ಸಹ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಹೇಳಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆದು ಮೇ ತಿಂಗಳಿನಲ್ಲಿ ಫಲಿತಾಂಶ ಸಹ ಹೊರಬಂದಿತು. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ 11 ಮತ್ತು 12ನೇ ಕಂತಿನ ಹಣ ಬಿಡುಗಡೆ ಆಗುವುದರಲ್ಲಿ ತಡವಾಗಿದೆ ಅಂತಾ ಹೇಳಲಾಗಿದೆ. ಈ ಬಗ್ಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲ ಹಂತದಲ್ಲಿ 11 ಮತ್ತು 12ನೇ ಕಂತಿನ ಹಣ ನಾಳೆಯೇ ಕೆಲ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ. ಜುಲೈ ತಿಂಗಳು ಮುಗಿಯುವುದರೊಳಗೆ ರಾಜ್ಯದ ಎಲ್ಲಾ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಒಟ್ಟಾಗಿ ಅಂದರೆ ₹4000 ಡಿಬಿಟಿ ಮೂಲಕ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಜಿಲ್ಲೆಯ ಮಹಿಳೆಯರಿಗೆ ನಾಳೆಯೇ ಬಿಡುಗಡೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಧಾರವಾಡ, ಮಂಡ್ಯ, ಮೈಸೂರು, ಚಿಕ್ಕ ಬಳ್ಳಾಪುರ ಇವಿಷ್ಟು ಜಿಲ್ಲೆಗಳ ಮಹಿಳೆಯರಿಗೆ ನಾಳೆಯೇ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಎಲ್ಲಾ ಮಹಿಳೆಯರು ಸಹ ನಾಳೆ ನಿಮ್ಮ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಹಣ ಬರದಿದ್ದರೆಯ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...