2024: ಕೇಂದ್ರ ಬಜೆಟ್‌ 2024-25ರಲ್ಲಿ ಯಾವುದು ದುಬಾರಿ? ಯಾವುದು ಅಗ್ಗ? ಇಲ್ಲಿದೆ ಸಂಪೂರ್ಣ ವಿವರ 2024 : ಈ ಬಾರಿಯ ಬಜೆಟ್ 2024 ರಲ್ಲಿ ಯಾವ ವಸ್ತುಗಳು ಅಗ್ಗವಾಗಿವೆ ಮತ್ತು ಯಾವ ವಸ್ತುಗಳು ದುಬಾರಿಯಾಗಿವೆ ಎಂಬುದನ್ನು ತಿಳಿಯೋಣ 2024 :ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮೋದಿ ಸರ್ಕಾರದ 3.0 ರ ಮೊದಲ ಸಾಮಾನ್ಯ ಬಜೆಟ್ (ಕೇಂದ್ರ ಬಜೆಟ್ 2024) ಮಂಡಿಸಿದ್ದಾರೆ. ಬಜೆಟ್‌ʼನಲ್ಲಿ ನಿರ್ಮಲಾ ಸೀತಾರಾಮನ್ ವಿವಿಧ ಕ್ಷೇತ್ರಗಳಿಗೆ ಹಲವು ಘೋಷಣೆಗಳನ್ನು ಮಾಡಿದ್ದು, ಇದು ಜನಸಾಮಾನ್ಯರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ. ಇದನ್ನೂ ಓದಿ: ಇನ್ನು ಈ ಬಾರಿಯ ಬಜೆಟ್ 2024 ರಲ್ಲಿ ಯಾವ ವಸ್ತುಗಳು ಅಗ್ಗವಾಗಿವೆ ಮತ್ತು ಯಾವ ವಸ್ತುಗಳು ದುಬಾರಿಯಾಗಿವೆ ಎಂಬುದನ್ನು ತಿಳಿಯೋಣ. ಬಜೆಟ್ 2024 ರಲ್ಲಿ ಯಾವುದು ಅಗ್ಗ? ಯಾವುದು ದುಬಾರಿ? ಇದನ್ನೂ ಓದಿ: ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿತಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ʼನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಮೂಲ ಕಸ್ಟಮ್ ಸುಂಕವನ್ನು ಶೇಕಡಾ 4 ರಷ್ಟು ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿಯ ಮೇಲಿನ ಮೂಲ ಕಸ್ಟಮ್ ಸುಂಕವನ್ನು ಶೇಕಡಾ 10 ರಿಂದ ಶೇಕಡಾ 6 ಕ್ಕೆ ಇಳಿಸಲಾಗಿದೆ. ಅಗ್ರಿ ಸೆಸ್ ಜೊತೆಗೆ ಒಟ್ಟು ಸುಂಕವನ್ನು ಶೇಕಡಾ 15 ರಿಂದ ಶೇಕಡಾ 11 ಕ್ಕೆ ಇಳಿಸಲಾಗಿದೆ. ಬಜೆಟ್ ಘೋಷಣೆ ಬಳಿಕ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಸುಮಾರು 2 ಸಾವಿರ ರೂ.ನಷ್ಟು ಕುಸಿದಿದ್ದರೆ, ಬೆಳ್ಳಿ ಬೆಲೆಯೂ ರೂ.3 ಸಾವಿರಕ್ಕೂ ಹೆಚ್ಚು ಇಳಿಕೆಯಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...