ದಕ್ಷಿಣ ಭಾರತಕ್ಕೆ‌ ಬಂದ ಜರ್ಮನಿಯ 'ಫ್ಲಿಕ್ಸ್‌ಬಸ್': ಸಚಿವ ಎಂಬಿ ಪಾಟೀಲ ಹಸಿರು ನಿಶಾನೆ : ಜರ್ಮನಿ ಮೂಲದ ಫ್ಲಿಕ್ಸ್‌ಬಸ್ ಸಂಚಾರಕ್ಕೆ ಸಚಿವ ಎಂಬಿ ಪಾಟೀಲ ಹಸಿರು ನಿಶಾನೆ : ಪ್ರಮುಖ ನಗರಗಳ ನಡುವೆ ಬಸ್ ಸಂಚಾರ ಒದಗಿಸುವ ಜರ್ಮನಿ ಮೂಲದ ಫ್ಲಿಕ್ಸ್‌ಬಸ್ ( ) ಸಂಚಾರಕ್ಕೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಮಂಗಳವಾರ ಹಸಿರು ನಿಶಾನೆ ತೋರಿದರು. ಇದರೊಂದಿಗೆ, ಫ್ಲಿಕ್ಸ್ ಬಸ್ ಸೇವೆಯು ದಕ್ಷಿಣ ಭಾರತಕ್ಕೆ ಪದಾರ್ಪಣೆ ಮಾಡಿದೆ. ( ) ಸೇವೆಗೆ ಹಸಿರು ನಿಶಾನೆ ತೋರಿ ಮಾತನಾಡಿದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ, ಭಾರತವೂ ಸೇರಿದಂತೆ 43 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಫ್ಲಿಕ್ಸ್‌ಬಸ್ ಸೇವೆಯು ದಕ್ಷಿಣ ಭಾರತದಲ್ಲಿ ಜನರ ಪ್ರಯಾಣದ ಅನುಭವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ- ದಲ್ಲಿ ಸಂಚಾರ ಜಾಲ ವಿಸ್ತರಿಸಿಕೊಳ್ಳುವ ಯೋಜನೆಯನ್ನು ಫ್ಲಿಕ್ಸ್‌ಬಸ್ () ಹೊಂದಿದೆ. ಹೆಚ್ಚಿನ ಅನುಕೂಲ, ಸುರಕ್ಷತೆ ಹಾಗೂ ಹೊರೆ ಎನ್ನಿಸದ ದರಗಳ ಮೂಲಕ ಬಸ್ ಪ್ರಯಾಣಿಕರ ವಿಶ್ವಾಸ ಗಳಿಸುವ ಗುರಿ ಹೊಂದಿದೆ ಎಂದರು. ಬಸ್ ಸಂಚಾರದಲ್ಲಿ ಭಾರತವು ಜಗತ್ತಿನ ಎರಡನೇ ದೊಡ್ಡ ಮಾರುಕಟ್ಟೆಯಾಗಿದೆ. ಪರಿಸರ ಸ್ನೇಹಿ ಇಂಧನಗಳ ( ) ಬಳಕೆಗೆ ಒತ್ತು ನೀಡಿ ದೇಶದಲ್ಲಿ ಸುಸ್ಥಿರ ಸಂಚಾರಕ್ಕೆ ಕೊಡುಗೆ ನೀಡಲು ಸಂಸ್ಥೆಯು ಆದ್ಯತೆ ನೀಡಬೇಕೆಂದು ಸಚಿವರು ಅಭಿಪ್ರಾಯಪಟ್ಟರು. ಇದನ್ನೂ ಓದಿ- ಜರ್ಮನಿಯ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೆಸಿಯರ್, ಫ್ಲಿಕ್ಸ್ ಬಸ್ ಸಹ-ಸ್ಥಾಪ ಡೇನಿಯಲ್ ಕ್ರೌಸ್, ಫ್ಲಿಕ್ಸ್ ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನ ಅವರು ಇದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...