ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ !ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ ಆದೇಶ ! 7th :ವಿಧಾನಸಭೆ ಅಧಿವೇಶನದಲ್ಲಿ ಏಳು ಲಕ್ಷಕ್ಕೂ ಅಧಿಕ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಲಿದ್ದಾರೆ. 7th :ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್ ಒಂದರಿಂದ ಜಾರಿಗೆ ತರಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.ಈ ಮೂಲಕ ವಿಧಾನಸಭೆ ಅಧಿವೇಶನದಲ್ಲಿ ಏಳು ಲಕ್ಷಕ್ಕೂ ಅಧಿಕ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಲಿದ್ದಾರೆ. ಶಿಫಾರಸುಗಳ ಕುರಿತು ಮಾತನಾಡಿದ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ,"ಏಳನೇ ವೇತನ ಆಯೋಗವು ಸರ್ಕಾರಿ ನೌಕರರ ಬೇಡಿಕೆಗಳಲ್ಲಿ ಒಂದಾಗಿದೆ. ಇದು ನಮ್ಮ ಪ್ರಣಾಳಿಕೆಯಲ್ಲಿಯೂ ಇತ್ತು.ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯೂ ಆಗಿದೆ. ಇದರಿಂದ ಸುಮಾರು 14ರಿಂದ 15 ಲಕ್ಷ ರಾಜ್ಯ ಸರ್ಕಾರೀ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಇದನ್ನೂ ಓದಿ : ವರದಿಯ ಪ್ರಕಾರ , ಮಾಜಿ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ ನೇತೃತ್ವದ 7 ನೇ ವೇತನ ಆಯೋಗವು27.5 ರಷ್ಟು ಹೆಚ್ಚಳವನ್ನು ಸೂಚಿಸಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ ₹ 17,440.15 ಕೋಟಿಗಳಷ್ಟು ಹೆಚ್ಚುವರಿ ಹೊರೆ ಬೀಳಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆಗಸ್ಟ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇದನ್ನೂ ಓದಿ : 2023ರ ಮಾರ್ಚ್‌ನಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೌಕರರಿಗೆ ಶೇ 17ರಷ್ಟು ಮಧ್ಯಂತರ ವೇತನವನ್ನು ನೀಡಿದ್ದರು. ಇದಕ್ಕೆ ಈಗ ಸಿದ್ದರಾಮಯ್ಯ ಸರ್ಕಾರ ಶೇ 10.5 ಅಂಕಗಳನ್ನು ಸೇರಿಸುವ ಸಾಧ್ಯತೆಯಿದೆ. ಹೀಗಾಗಿ ಒಟ್ಟು 27.5% ಹೆಚ್ಚಳವಾಗಲಿದೆ ಎಂದು ಮೂಲಗಳು ತಿಳಿಸಿವೆ . 7 ನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ಮೂಲ ವೇತನ ಹೆಚ್ಚಳವಾಗಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...