: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ! updateʼs: ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿಪಡಿಸಲಾಗಿತ್ತು. updateʼs:ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ. ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲವಾದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಇದನ್ನೂ ಓದಿ: ಹೀಗಾಗಿ ತಮ್ಮ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿಪಡಿಸಲಾಗಿತ್ತು. ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. ಹೀಗಾಗಿ ಯಾರ್ಯಾರು ಇದುವರೆಗೆ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡಿಲ್ಲವೋ ಕೂಡಲೇ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...