: ಜುಲೈ ಮೊದಲ ದಿನವೇ ಗುಡ್‌ ನ್ಯೂಸ್; ಸಿಲಿಂಡರ್ ಬೆಲೆ ಇಳಿಕೆ! : ಕೋಲ್ಕತ್ತಾ, ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2KG ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ 529 ರೂ., 503 ರೂ., 502.5 ರೂ. ಮತ್ತು 518.5 ರೂ. ಆಗಿದೆ. ಕರ್ನಾಟಕ ಮತ್ತು ಬೆಂಗಳೂರಿನಲ್ಲಿ 14.5KG ಗೃಹಬಳಕೆಯ ಸಿಲಿಂಡರ್ ಬೆಲೆ 905.5 ರೂ. ಇದ್ದರೆ, ವಾಣಿಜ್ಯ ಬಳಕೆಯ 14.5KGಯ ಸಿಲಿಂಡರ್ ಬೆಲೆ 1,813 ರೂ. ಇದೆ. :ದೇಶದ ಜನಸಾಮಾನ್ಯರಿಗೆ ಜುಲೈ ತಿಂಗಳ ಮೊದಲ ದಿನವೇ ಭರ್ಜರಿ ಸಿಹಿಸುದ್ದಿ ದೊರೆತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಇಳಿಕೆ ಮಾಡಲು ನಿರ್ಧರಿಸಿದ್ದು, ಜನರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಅಂದಹಾಗೆ ಈ ಸಿಲಿಂಡರ್ ಬೆಲೆಯಲ್ಲಿನ ಕಡಿತವು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದು, ಇದರ ಲಾಭ ಕೆಲವರಿಗೆ ಮಾತ್ರ ದೊರೆಯಲಿದೆ ಎಂದು ವರದಿಯಾಗಿದೆ. ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ( ) ಬೆಲೆಯನ್ನು ಕೊಂಚ ಕಡಿಮೆ ಮಾಡಿದೆ. ದೇಶದ ಮೆಟ್ರೋ ನಗರಗಳಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ 14.2KG ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿ ಬದಲಾವಣೆಯಾಗಿಲ್ಲ.ಇಂಡಿಯನ್ ಆಯಿಲ್ ಅಥಾರಿಟಿ ಪ್ರಕಾರ, ಜುಲೈ 1ರಿಂದ ಕೋಲ್ಕತ್ತಾದಲ್ಲಿ 19KG ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂ.ಗೆ ಇಳಿಯಲಿದೆ. ಜೂನ್‌ನಲ್ಲಿ ಕೋಲ್ಕತ್ತಾದಲ್ಲಿ 19KG ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂ.ಇತ್ತು. ಇದೀಗ 31 ರೂ. ಇಳಿಕೆಯಾಗಿದೆ. ಇದನ್ನೂ ಓದಿ: ದೇಶದ ಇತರ ಮೆಟ್ರೋ ನಗರಗಳಲ್ಲಿ 19KG ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿಯೂ ಕೊಂಚ ಕಡಿಮೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂ. ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂ. ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19KGಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ 1,598 ರೂ. ಮತ್ತು 1,809.5 ರೂ.ಗೆ ಇಳಿದಿದೆ. ಎರಡೂ ನಗರಗಳಲ್ಲಿ 31 ರೂ.ನಷ್ಟು ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಪ್ರಕಾರ, ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ 829 ರೂ. ಇದೆ. ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2KG ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ 803 ರೂ., 802.5 ರೂ. ಮತ್ತು 818.5 ರೂ. ಆಗಿದೆ. ಇದನ್ನೂ ಓದಿ: ಯಡಿ ಫಲಾನುಭವಿಗಳು 14.2KG ಅಡುಗೆ ಅನಿಲ ಸಿಲಿಂಡರ್‌ಅನ್ನು ಕೊಂಚ ಕಡಿಮೆ ಬೆಲೆಗೆ ಖರೀದಿಸಬಹುದು. ಅಂದರೆ ಅವರಿಗೆ 300 ರೂ. ಕಡಿಮೆ ಸಿಗುತ್ತದೆ. ಕೋಲ್ಕತ್ತಾ, ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2KG ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ 529 ರೂ., 503 ರೂ., 502.5 ರೂ. ಮತ್ತು 518.5 ರೂ. ಆಗಿದೆ. ಕರ್ನಾಟಕ ಮತ್ತು ಬೆಂಗಳೂರಿನಲ್ಲಿ 14.5KG ಗೃಹಬಳಕೆಯ ಸಿಲಿಂಡರ್ ಬೆಲೆ 905.5 ರೂ. ಇದ್ದರೆ, ವಾಣಿಜ್ಯ ಬಳಕೆಯ 14.5KGಯ ಸಿಲಿಂಡರ್ ಬೆಲೆ 1,813 ರೂ. ಇದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...