: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ! : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಈ ನಿಯಮದಡಿ ಬರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ. :ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಘೋಷಿಸಿತ್ತು. ಅದೇ ರೀತಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ೨೦೦೦ ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಒಂದು. ಇದು ಕಾಂಗ್ರೆಸ್‌ ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಮಹಿಳಾಮಣಿಯರಿಗೆ ಆರ್ಥಿಕ ಸಹಾಯ ಸಿಗುತ್ತಿದೆ. ಮನೆ ನಡೆಸಿಕೊಂಡು ಹೋಗುವಯರಿಗಾಗಿ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಈ ಯೋಜನೆಯಿಂದ ಮನೆ ನಡೆಸಿಕೊಂಡು ಹೋಗುವುದಕ್ಕೆ ಆರ್ಥಿಕವಾಗಿ ತುಂಬಾ ಸಹಾಯವಾಗುತ್ತಿದೆ ಅಂತಾ ಹಲವು ಮಹಿಳೆಯರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಈ ನಿಯಮದಡಿ ಬರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ. ಇಂತವರ ರೇಷನ್ ಕಾರ್ಡ್‌ಗಳನ್ನು ಕ್ಯಾನ್ಸಲ್ ಮಾಡುವುದಕ್ಕೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ವಿಚಾರದಲ್ಲಿ ಸಹ ಹಲವು ಮಹಿಳೆಯರು ಸುಳ್ಳು ಮಾಹಿತಿ ನೀಡಿ ಪ್ರತಿ ತಿಂಗಳು ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರಂತೆ. ಹೆಚ್ಚು ಆದಾಯ ಹೊಂದಿರುವವರು ಮತ್ತು ಟ್ಯಾಕ್ಸ್ ಪಾವತಿ ಮಾಡುತ್ತಿರುವವರು ಸಹ ಗೃಹಲಕ್ಷ್ಮಿಯೋಜನೆಯ ಫಲಾನುಭವಿಗಳಾಗಿದ್ದಾರೆ. ಇಂತವರನ್ನು ಹುಡುಕುವ ಪ್ರಕ್ರಿಯೆಯನ್ನು ಸರ್ಕಾರ ಶುರುಮಾಡಿದೆ. ಇದನ್ನೂ ಓದಿ: ಈ ಒಂದು ಕೆಲಸವನ್ನು ಬಹಳ ಸ್ಟ್ರಿಕ್ಟ್ ಆಗಿ ನಡೆಸಲಾಗುತ್ತಿದ್ದು, ಸುಳ್ಳು ಹೇಳಿ ಸೌಲಭ್ಯ ಪಡೆಯುತ್ತಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಕ್ಯಾನ್ಸಲ್ ಮಾಡಲಾಗುತ್ತದೆ. ಕಷ್ಟದಲ್ಲಿದ್ದು ಅರ್ಹತೆ ಹೊಂದಿರುವ ಮಹಿಳೆಯರಿಗೆ ಮಾತ್ರಯೋಜನೆಯ ಸೌಲಭ್ಯ ಸಿಗಲಿ ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಅದೇ ನಿಟ್ಟಿನಲ್ಲಿ ಈಗ ಕೆಲಸ ನಡೆಯುತ್ತಿವೆ. 11ನೇ ಕಂತಿನ ಹಣ ಒಂದೆರಡು ದಿನಗಳಲ್ಲಿ ಜಮೆ ಆಗಲಿದೆ ಅನ್ನೋ ಮಾಹಿತಿ ಸಿಕ್ಕಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...