ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ! : ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ. :ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರವು ʼಗೃಹಲಕ್ಷ್ಮೀʼ ಯೋಜನೆಯನ್ನು ರೂಪಿಸಿದೆ. ಮಹಿಳೆಯ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಹೀಗಾಗಿ ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ. ಜಮಾ ಮಾಡಲು ಈ ಯೋಜನೆಯನ್ನು ಅನುಷ್ಠಾನ ಮಾಡಿದೆ. 2023ರ ರಾಜ್ಯಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ʼಗೃಹ ಲಕ್ಷ್ಮೀʼ ಯೋಜನೆಯ ಬಗ್ಗೆ ಘೋಷಿಸಿತ್ತು. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಲಾಗಿತ್ತು. ಅದರಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾಣಕ್ಕೆ ತರಲು ಸಿಎಂ ಸಿದ್ದರಾಮಯ್ಯನವರು ಈ ಯೋಜನೆಗಳ ಘೋಷಣೆ ಮಾಡಿದರು. ಇದನ್ನೂ ಓದಿ: ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಈಗಾಗಲೇ ʼಗೃಹಲಕ್ಷ್ಮೀʼ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 10 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. 11ನೇ ಕಂತಿನ ಹಣ ಕೆಲವೇ ದಿನಗಳಲ್ಲಿ ತಲುಪಬೇಕಿದೆ. ಆದರೆ ಕೆಲವು ಮಹಿಳೆಯರಿಗೆ ಇನ್ನು ಕೂಡ ʼಗೃಹಲಕ್ಷ್ಮೀʼ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಬರುತ್ತಿಲ್ಲ. ಇದಕ್ಕೆ ಕಾರಣ ಅವರು ಕೆಲವು ದಾಖಲೆಗಳನ್ನು ಸರಿಯಾಗಿ ನೀಡದಿರುವುದು. ಒಂದು ವೇಳೆ ನಿಮಗೆ ʼಗೃಹಲಕ್ಷ್ಮೀʼ ಯೋಜನೆಯ ಹಣ ಇನ್ನೂ ಬರುತ್ತಿಲ್ಲವೆಂದರೆ, ಕೆಲವು ದಾಖಲೆಗಳನ್ನು ಕೂಡಲೇ ನೀಡಬೇಕು. ಈ ಅಗತ್ಯ ದಾಖಲೆಗಳನ್ನು ನೀಡಿದ್ರೆ ನಿಮಗೆ ಈ ಯೋಜನೆಯ ಹಣ ಖಂಡಿತ ಬರುತ್ತದೆ. ನೀಡಬೇಕಾದ ಅಗತ್ಯ ದಾಖಲೆಗಳು ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...